ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಪ್ರವಾಹ ಹಿನ್ನೆಲೆ ಸರಳ ಆಚರಣೆ
ಬೀದರ:16OCT19: 23 ರಾಜ್ಯದಲ್ಲಿನ ವಿವಿಧ ಜಿಲ್ಲೆಗಳಲ್ಲಿ ಉಂಟಾದ ಪ್ರವಾಹ ಹಿನ್ನೆಲೆಯಲ್ಲಿ ಅ. 23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲು ತಿಮಾರ್ನಿಸಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಯಿತು. ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಮಾತನಾಡಿ, ರಾಜ್ಯದ ಬಹುಪಾಲು ಜಿಲ್ಲೆಗಳಲ್ಲಿ ಜಲ ಪ್ರವಾಹದಿಂದಾಗಿ ಜನರು ಸಂಕಷ್ಟದಿಂದ ಬಳಲುತ್ತಿರುವ ಕಾರಣದಿಂದಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಕುರಿತಂತೆ ರಾಜ್ಯಮಟ್ಟದ ಪೂರ್ವಭಾವಿ ಸಭೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಅದರಂತೆ ಬೀದರ ಜಿಲ್ಲೆಯಲ್ಲಿಯೂ ಸರಳವಾಗಿ ಆಚರಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಅಂದು ಬೆಳಗ್ಗೆ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಚೆರಿ, ಸಂಘ ಸಂಸ್ಥೆಗಳಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಸರಳವಾಗಿ ಆಚರಿಸಬೇಕು ಎಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ, ಅಪರ ಜಿಲ್ಲಾಧಿಕಾರಿ ರುದ್ರೆಶ ಗಾಳಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ, ಪತ್ರಕರ್ತರಾದ ಶಿವಶರಣಪ್ಪ ವಾಲಿ, ಜಗನ್ನಾಥ ಹೆಬ್ಬಾಳೆ, ಮುಖಂಡರಾದ ರಾಜು ಕಡ್ಯಾಳ, ಅನೀಲ ಬೆಲ್ದಾರ, ಶ್ರಿಮಂತ ಸಪಾಟೆ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















