ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೆ- ಮೂವರು ವಜಾ
ಬೀದರ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಕಿರಿಯ ಆರೋಗ್ಯ ಸಹಾಯಕಿ ಮತ್ತು ಇಬ್ಬರು ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕೊರೊನಾ ಮಹಾಮಾರಿ ಜಿಲ್ಲೆಯಲ್ಲಿ ಹರಡುತ್ತಿರುವ ರಾಷ್ಟ್ರೀಯ ವಿಪತ್ತಿನ ಸಂದರ್ಭದಲ್ಲಿ, ಕೋವಿಡ್-19 ವೈರಸ್ ಪತ್ತೆ ಹಚ್ಚುವ ಸರ್ವೇ ಕಾರ್ಯದಲ್ಲಿ ನಿರ್ಲಕ್ಷ್ಯತೆ ವಹಿಸಿರುವುದು ಕಂಡು ಬಂದಿರುವುದಕ್ಕೆ ಹಾಗೂ ಗುತ್ತಿಗೆ ಒಪ್ಪಂದದ ಮತ್ತು ಸೇವಾ ನಿಯಮಗಳನ್ನು ಉಲ್ಲಂಘಿಸಿರುವದಕ್ಕೆ ಒಬ್ಬರು ಕಿರಿಯ ಆರೋಗ್ಯ ಸಹಾಯಕಿ ಮತ್ತು ಇಬ್ಬರು ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಬೀದರನ 10 ಹಾಸಿಗೆ ಪ್ರಸೂತಿ ಗೃಹದ ಕಿರಿಯ ಆರೋಗ್ಯ ಸಹಾಯಕಿ ಸೇವೆಯಿಂದ ವಜಾಗೊಂಡವರು. ಮತ್ತು 10 ಹಾಸಿಗೆ ಪ್ರಸೂತಿ ಗೃಹದ ಆಶಾ ಕಾರ್ಯಕರ್ತೆ ಹಾಗೂ ಬಿದ್ರಿ ಕಾಲೋನಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಕರ್ತವ್ಯದಿಂದ ವಜಾಗೊಂಡವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
Datr:17-04-2020
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…