Home ನಿಮ್ಮ ಜಿಲ್ಲೆ ಬೀದರ ಕೆರೆಗಳ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಿ: ಡಾ|ಹೆಚ್.ಆರ್.ಮಹಾದೇವ

ಕೆರೆಗಳ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಿ: ಡಾ|ಹೆಚ್.ಆರ್.ಮಹಾದೇವ

ಬೀದರ: ಜಿಲ್ಲೆಯಲ್ಲಿರುವ ಎಲ್ಲ ಕೆರೆಗಳನ್ನು ಸಮಗ್ರ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಸಿದ್ದಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ| ಹೆಚ್.ಆರ್.ಮಹಾದೇವ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಡಿ.೧೮ರಂದು ನಡೆದ ಕೆರೆ ಸಂರಕ್ಷಣೆ ಅಭಿವೃದ್ಧಿ ಪ್ರಾಧಿಕಾರದಿಂದ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಕೆರೆಗಳ ಸ್ಥಿತಿಗತಿಯ ಬಗ್ಗೆ ಸಣ್ಣ ನೀರಾವರಿ ಇಲಾಖೆ, ಪಂಚಾಯತ್ ರಾಜ್ ಎಂಜಿನೀಯರಿAಗ್ ಇಲಾಖೆ ಹಾಗೂ ಇನ್ನಿತರೆ ಅಧಿಕಾರಿಗಳಿಂದ ವಿವರಣೆ ಪಡೆದರು. ಒತ್ತುವರಿಯಾಗಿರುವ ಕೆರೆಗಳನ್ನು ಗುರುತಿಸಿ, ಒತ್ತುವರಿ ತೆರವಿಗೆ ಮೊದಲ ಆದ್ಯತೆ ನೀಡಬೇಕು. ಕೆರೆಯಲ್ಲಿನ ನೀರು ಕಲುಷಿತವಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಕೆರೆಗಳಿಗೆ ಮಲಿನ ನೀರು ಸೇರದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಜಿಲ್ಲಾಧಿಕಾರಿಯವರು ಸಣ್ಣ ನೀರಾವರಿ, ಜಿಲ್ಲಾ ಪಂಚಾಯತ್ ಹಾಗೂ ಮತ್ತಿತರೆ ಇಲಾಖೆಗಳಿಂದ ನೀರು ಬಳಕೆದಾರರ ಸಂಘಗಳನ್ನು ರಚಿಸಿರುವ ಬಗ್ಗೆ ವಿವರಣೆ ಪಡೆದರು. ಈ ವೇಳೆ ಅಧಿಕಾರಿಗಳು ಮಾತನಾಡಿ, ಸಂಘಗಳನ್ನು ರಚಿಸುವ ಪ್ರಕ್ರಿಯೆ ನಡೆದಿದ್ದು, ಸಣ್ಣ ನೀರಾವರಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್‌ನಿಂದ ಇನ್ನಷ್ಟು ಸಂಘಗಳನ್ನು ರಚಿಸುವುದು ಬಾಕಿ ಇದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗ್ಯಾನೇಂದ್ರಕುಮಾರ ಗಂಗವಾರ, ಬೀದರ ಸಹಾಯಕ ಆಯುಕ್ತರಾದ ಅಕ್ಷಯ ಶ್ರೀಧರ್, ಸಣ್ಣ ನೀರಾವರಿ ಇಲಾಖೆಯ ಬೀದರ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಸುರೇಶ ಮೇಧಾ, ಪಂಚಾಯತ್ ರಾಜ್ ಎಂಜಿನೀಯರಿಂಗ್ ಇಲಾಖೆಯ ಕಾರ್ಯಪಾಲಕ ಎಂಜೀನಿಯರ್ ಬಾಬು ಪವಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ವಿದ್ಯಾನಂದ.ಸಿ, ಬೀದರ ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನೀಯರ್ ರಾಜಶೇಖರ ಮಠ, ಮೀನುಗಾರಿಕೆ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…