Home ನಿಮ್ಮ ಜಿಲ್ಲೆ ಬೀದರ ಕೇಂದ್ರ ಗೃಹ ಸಚಿವ ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಲ್ಲಿ-ಚವ್ಹಾಣ್

ಕೇಂದ್ರ ಗೃಹ ಸಚಿವ ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಲ್ಲಿ-ಚವ್ಹಾಣ್

ಕೇಂದ್ರ ಗೃಹ ಸಚಿವ ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಲ್ಲಿ-ಚವ್ಹಾಣ್

ಬೀದರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೋವಿಡ್-19 ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಚಿವ ಪ್ರಭು ಚವ್ಹಾಣ್ ಸೋಮವಾರ ಹೋಮ, ಹವನ ನಡೆಸುವ ಮೂಲಕ ಸೋಂಕಿನಿAದ ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಸಚಿವ ಚವ್ಹಾಣ್ ತಮ್ಮ ಕುಟುಂಬದ ಸದಸ್ಯರೊಂದಿಗೆ ಸ್ವಗ್ರಾಮ ಬೋಂತಿಯ ಘಮಸುಬಾಯಿ ತಾಂಡಾದ ಶ್ರೀ ಸಂತ ಸೇವಾಲಾಲ್ ಮಹಾರಾಜರು ಮತ್ತು ಇಚ್ಛಾಪೂರ್ತಿ ಮಾತಾ ಜಗದಂಬಾ ದೇವಸ್ಥಾನದಲ್ಲಿ ಹೋಮ, ಹವನ ಮತ್ತು ವಿಶೇಷ ಪೂಜೆ ನಡೆಸಿದರು. ರಾಜ್ಯದಲ್ಲಿ ಕರೋನಾ ಸೋಂಕು ಹರಡದಂತೆ ತಡೆಯಲು ಮುಖ್ಯಮಂತ್ರಿಗಳು ನಿರಂತರವಾಗಿ ಎಲ್ಲ ಸಚಿವರು, ಉನ್ನತಮಟ್ಟದ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಹತ್ತು ಹಲವಾರು ಕ್ರಮಗಳನ್ನು ವಹಿಸಿ ಸತತ ಪ್ರಯತ್ನ ವಹಿಸಿದ್ದಾರೆ. ರಾಜ್ಯದ ಜನರ ಹಿತ ಕಾಯಲು ಶ್ರಮ ವಹಿಸಿದ್ದಾರೆ. ಕೂಡಲೇ ಮುಖ್ಯಮಂತ್ರಿಗಳು ಕೋವಿಡ್‌ನಿಂದ ಬೇಗ ಗುಣಮುಖರಾಗಬೇಕು ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ.

Date:03-08-2020  www.kknewsonline.in

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…