ಜನರ ಸಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸಬೇಕು: ಶಾಸಕ ಪಾಟೀಲ
ಹುಮನಾಬಾದ: ವಿಶ್ವದಲ್ಲಿ ಮಹಾಮಾರಿ ಕೊರೊನಾ ವೈರಸ್ ಭೀಕರತೆ ಹೆಚ್ಚಾಗುತ್ತಿದ್ದು, ಕ್ಷೇತ್ರದ ಮೂರು ಪುರಸಭೆ ಹಾಗೂ ಗ್ರಾಮೀಣ ಭಾಗದಲ್ಲಿ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಜನರಿಗೆ ಕುಡಿವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೊರೊನಾ ಹಾಗೂ ಕುಡಿಯುವ ನೀರಿನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ್ದು, ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಆಗಬೇಕು ಎಂದು ಸೂಚಿಸಿದರು.
ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ನ ಚರಂಡಿಗಳು ಸ್ವಚ್ಛತೆ ಆಗಬೇಕು. ಕ್ರಿಮಿನಾಶಕ ಸಿಂಪಡಣೆ ಮಾಡಬೇಕು. ಎಲ್ಲಾ ಗ್ರಾಮಗಳಲ್ಲಿ ಫಾರ್ಗಿಂಗ್ ಮಾಡಬೇಕು. ಅಲ್ಲದೆ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಿ ಎಂದು ಸೂಚಿಸಿದರು.
ಮೊಬೈಲ್ ಬಂದ್ ಮಾಡಬೇಡಿ: ಎಲ್ಲಾ ಅಧಿಕಾರುಗಳು ಸಾರ್ವಜನಿಕರ ಕರೆಗಳು ಸ್ವೀಕರಿಸಿ. ಯಾವ ಕಾರಣಕ್ಕೆ ಅಧಿಕಾರಿಗಳು ಕರೆ ಸ್ವೀಕರಿಸುವುದಿಲ್ಲ. ಜನರ ಕಷ್ಟಕ್ಕೆ ಅಧಿಕಾರಿಗಳೆ ಸ್ಪಂದಿಸಬೇಕು. ನೀವುಗಳೇ ಜನರಿಂದ ದೂರ ಆದರೆ ಹೇಗೆ. ಅಂತಹ ಅಧಿಕಾರಿಗಳ ಪಟ್ಟಿ ತಯಾರಿಸಿ ಕ್ರಮ ತೆಗೆದುಕೊಳ್ಳಿ ಎಂದು ತಾಪಂ ಇಒ ಅವರಿಗೆ ಸೂಚಿಸಿದರು.
ಫಾರ್ಗಿಂಗ್ ಖರೀದಿ ಮಾಡಿ: ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಫಾರ್ಗಿಂಗ್ ಯಂತ್ರ ಖರೀದಿಸಿ. ಅನಗತ್ಯ ಕೆಲಸಕ್ಕೆ ಸಾವಿರಾರು ಹಣ ಖರ್ಚು ಮಾಡಲಾಗುತ್ತಿದೆ. ಆದರೆ, ಯಾಕೆ ಫಾರ್ಗಿಂಗ್ ಯಂತ್ರಗಳು ಖರೀದಿ ಮಾಡುತ್ತಿಲ್ಲ. ಕೂಡಲೇ ಎಲ್ಲಾ ಅಧಿಕಾರಿಗಳು ಕೂಡಲೇ ಫಾರ್ಗಿಂಗ್ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚಿಸಿದರು.
Date: 30-03-2020
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …

















