ಪ್ರತಿ ಟನ್ ಕಬ್ಬಿಗೆ ರೂ.2400 ನಿಗದಿ ದರ ನಿಗದಿ
ಪ್ರತಿ ಟನ್ ಕಬ್ಬಿಗೆ ರೈತರಿಗೆ ಪಾವತಿಸಬೇಕಾದ ದರ ರೂ.2400 ನಿಗದಿ.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ
ಬೀದರ: 2020-21 ಸಾಲಿಗೆ ಕಬ್ಬು ಸರಬರಾಜು ಮಾಡಿದ ರೈತರ ಕಬ್ಬಿನ ದರ ನಿಗದಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನವರಿ 02 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.
ಪ್ರತ್ಯೇಕ ಸಭೆ: ಸಂಸದರು, ಶಾಸಕರು ಮತ್ತು ಇನ್ನೀತರ ಜನಪ್ರತಿನಿಧಿಗಳು,ಜಿಲ್ಲಾಧಿಕಾರಿಗಳು ಮತ್ತು ವಿವಿಧ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಚಿವರು ಕಬ್ಬಿನ ದರ ನಿಗದಿಪಡಿಸುವುದಕ್ಕೆ ಸಂಬಂಧಿಸಿದಂತೆ ಎರಡು ಗಂಟೆಗೂ ಹೆಚ್ಚು ಕಾಲ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚಿಸಿದರು.
ರಾಜ್ಯ ಸರ್ಕಾರವು ರೈತರು ಮತ್ತು ಕಾರ್ಖಾನೆಗಳ ಪರವಿದೆ. ರೈತರಿಗೆ ತೊಂದರೆಯಾಗದಂತೆ ಮತ್ತು ಕಾರ್ಖಾನೆಗಳ ಮೇಲೆ ಹೊರೆಯಾಗದಂತೆ ನೋಡಿಕೊಳ್ಳುತ್ತೇವೆ. ರೈತರು ಮತ್ತು ಕಾರ್ಖಾನೆಗಳೊಂದಿಗೆ ಸದಾಕಾಲ ಜೊತೆಗೆ ಇರುತ್ತೇವೆ. ಹೀಗಾಗಿ ರೈತರಿಗೆ ನ್ಯಾಯಯುತ ದರ ನೀಡಲು ತಾವುಗಳು ಸಹಕರಿಸಬೇಕು ಎಂದು ಸಭೆಯಲ್ಲಿದ್ದ ವಿವಿಧ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವರು, ನಿರಂತರ ಒತ್ತಡ ಹಾಕಿ ಅವರ ಮನವೊಲಿಸಿ, ರೈತರಿಗೆ ಪಾವತಿಸಬೇಕಾದ ದರ ರೂ.2400 ರೂ.ಗೆ ಒಪ್ಪಿಸಿದರು.
ರೈತರೊಂದಿಗೆ ಸಭೆ: ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತರ ಸಭೆ ನಡೆಸಿ ಮಾತನಾಡಿದ ಸಚಿವರು, ರೈತರ ಬೆವರಿಗೆ ಸೂಕ್ತ ಬೆಲೆ ಸಿಗಬೇಕು ಎಂದು ಯೋಚಿಸಿ, ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಎಲ್ಲಾ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಿ ರೈತರಿಗೆ ಅನುಕೂಲವಾಗುವ ದರ ನಿಗದಿಪಡಿಸಿ ನಿರ್ಣಯಿಸಲಾಗಿದೆ. ಪ್ರತಿ ಟನ್ ಕಬ್ವಿಗೆ ರೈತರಿಗೆ ಪಾವತಿಸಬೇಕಾದ ಒಟ್ಟು ದರ ರೂ. 2400 ನಿಗದಿಪಡಿಸಿ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಸಚಿವರು ತಿಳಿಸಿದರು.ಸಭೆ
೨ಯ ನಿರ್ಣಯಕ್ಕೆ ಎಲ್ಲ ರೈತರು, ರೈತ ಮುಖಂಡರು ಒಪ್ಪಿಗೆ ಸೂಚಿಸಿದರು. ರೈತರಿಗೆ ಕೆಲವೊಮ್ಮೆ ಮೂರು ನಾಲ್ಕು ತಿಂಗಳ ಬಳಿಕ ಪೆಮೇಂಟ್ ಮಾಡುತ್ತಾರೆ. ಹೀಗೆ ಪೇಮೆಂಟ್ ಮಾಡುವುದು ವಿಳಂಬವಾಗಬಾರದು ಎಂದು ರೈತರು ಸಭೆಯಲ್ಲಿ ಮನವಿ ಮಾಡಿದರು. ರೈತರಿಗೆ ಅನುಕೂಲವಾಗುವ ಹಾಗೆ ಬೇಗನೆ ಪಾವತಿಗೆ ಕ್ರಮ ವಹಿಸಲು ಕೂಡ ಸಕ್ಕರೆ ಕಾರ್ಖಾನೆಗಳಿಗೆ ತಿಳಿಸುವುದಾಗಿ ಸಚಿವರು ಹೇಳಿದರು.
![]()
ಈ ಸಂದರ್ಭದಲ್ಲಿ ಸಂಸದರಾದ ಭಗವಂತ ಖೂಬಾ ಅವರು ಮಾತನಾಡಿ, ಜಿಲ್ಲೆಯ ಜನಪ್ರತಿನಿಧಿಗಳು ಪಕ್ಷಬೇಧ ಮರೆತು ಎಲ್ಲರು ಸೇರಿ ಚರ್ಚಿಸಿ, ರೈತರಿಗೆ ದರ ನಿಗದಿಪಡಿಸುವ ವಿಷಯದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಪ್ರತಿ ಟನ್ ಕಬ್ಬಿಗೆ ರೂ.2400 ನ್ನು ರೈತರಿಗೆ ಪಾವತಿಸಲು ಕಾರ್ಖಾನೆಗಳ ಆಡಳಿತ ಮಂಡಳಿಯವರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.
ಇದೆ ವೇಳೆಯಲ್ಲಿ ಶಾಸಕರಾದ ರಾಜಶೇಖರ ಪಾಟೀಲ ಅವರು ಮಾತನಾಡಿ, ಎಲ್ಲ ಜನಪ್ರತಿನಿಧಿಗಳು ಸೇರಿ, ಚರ್ಚಿಸಿ ರೈತರಿಗೆ ನ್ಯಾಯಯುತ ದರ ನೀಡಿದ್ದೇವೆ ಎಂದು ತಿಳಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶೈಲೇಂದ್ರ ಬೆಲ್ದಾಳೆ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ, ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಾಗೇಶ ಡಿ.ಎಲ್., ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ, ಭುವನೇಶ ಪಟೇಲ್, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಬಿ.ಬಾಬುರೆಡ್ಡಿ, ವಿವಿಧ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ವಿವಿಧ ರೈತ ಸಂಘಟನೆಗಳ ಮುಖಂಡರು ಇದ್ದರು.
ಭಾಲ್ಕಿಯ ಮಹಾತ್ಮ ಗಾಂಧಿ ಸಕ್ಕರೆ ಕಾರ್ಖಾನೆ, ಬೀದರನ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ, ಭಾಲ್ಕೇಶ್ವರ ಶುಗರ್ಸ್ ಲಿಮಿಟೆಡ್, ಬೀದರ ಕಿಸಾನ್ ಸಕ್ಕರೆ ಕಾರ್ಖಾನೆ ನಿಯಮಿತ, ಬೀದರ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತದ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಸಭೆಯಲ್ಲಿದ್ದರು.
Date: 02-01-2020
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















