ಬಸ್ ಸೌಲಭ್ಯಕ್ಕೆ ಆಗ್ರಹಿಸಿಹಳ್ಳಿಖೇಡ (ಕೆ) ಗ್ರಾಮದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಹುಮನಾಬಾದ: ಡಿಸೆಂಬರ್ 29: ಬಸ್ ಸೌಲಭ್ಯಕ್ಕೆ ಆಗ್ರಹಿಸಿ ರಸ್ತೆ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ. ತಾಲೂಕಿನ ಹಳ್ಳಿಖೇಡ (ಕೆ) ಗ್ರಾಮದ ಮುಖ್ಯರಸ್ತೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ನೂರಾರು ವಾಹನಗಳು ರಸ್ತೆಯಲ್ಲಿ ನಿಂತಿದ್ದವು. ಪ್ರತಿಭಟನ ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ಡಾ। ಚಂದ್ರಶೇಖರ್ ಪಾಟೀಲ್ ಭೇಟಿನೀಡಿ ವಿದ್ಯಾರ್ಥಿ ಮನವೊಲಿಸುವ ಪ್ರಯತ್ನ ನಡೆಸಿದರು.
ಪ್ರತಿಭಟನಾ ಸ್ಥಳಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳನ್ನು ಕರೆಸಿ ವಿದ್ಯಾರ್ಥಿಗಳಿಗೆ ಬಸ್ ಸಂಚಾರಕ್ಕೆ ಅಡಚಣೆಯಾಗದಂತೆ ಬಸ್ ವ್ಯವಸ್ಥೆ ಮಾಡುವಂತೆ ಡಾ। ಚಂದ್ರಶೇಖರ ಪಾಟೀಲ ಸೂಚಿಸಿದರು.
ಕಲಬುರಗಿ ಕಡೆಯಿಂದ ಬರುವ ಬಸ್ ಗಳನ್ನು ಕೂಡ ಗ್ರಾಮದಲ್ಲಿ ನಿಲ್ಲಿಸಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಡಾ। ಚಂದ್ರಶೇಖರ ಪಾಟೀಲ ತಿಳಿಸಿದರು.
Date: 29-12-2021 :
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















