ಮಳೆಹಾನಿ ಸಮೀಕ್ಷೆಗೆ ಕೇಂದ್ರ ತಂಡ ಬರಲಿದೆ : ಸಚಿವ ಆರ್.ಅಶೋಕ್
ಮಳೆಹಾನಿ ಸಮೀಕ್ಷೆಗೆ ಕೇಂದ್ರ ತಂಡ ಬರಲಿದೆ : ಸಚಿವ ಆರ್.ಅಶೋಕ್
ಬೀದರ: ರಾಜ್ಯದಲ್ಲಿ ಮಳೆಯಿಂದ ಸಂಭವಿಸಿದ ಹಾನಿಯ ಸಮೀಕ್ಷೆಗಾಗಿ ಕೇಂದ್ರದಿಂದ ಆರು ಜನ ಅಧಿಕಾರಿಗಳ ತಂಡ ರಾಜ್ಯಕ್ಕೆ ಬರಲಿದ್ದು, ಮಳೆಯಿಂದ ಸಂಭವಿಸಿದ ಹಾನಿ ಕುರಿತು ಸಮೀಕ್ಷೆ ನಡೆಸಲಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು
![]()
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಿಂದಾದ ಹಾನಿ ಕುರಿತು ಸಮೀಕ್ಷೆ ಪಡಿಸಲಿದ್ದಾರೆ. 3-4 ದಿನಗಳ ಕಾಲ ವಿವಿಧೆಡೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಅಧಿಕಾರಿಗಳಿಗೆ ನಾನು ಕೂಡ ಖುದ್ದು ಭೇಟಿ ಮಾಡಿ ರಾಜ್ಯದಲ್ಲಿ ಸಂಭವಿಸಿದ ಹಾನಿ ಕುರಿತು ಮಾಹಿತಿ ನೀಡುತ್ತೇನೆ ಎಂದು ಹೇಳಿದರು.ಬೀದರ್ ಜಿಲ್ಲೆಯಲ್ಲಿ ಇವರಿಗೆ 530 ಮಿ.ಮೀ ಮಳೆಯಾಗಿದೆ. ವಾಡಿಕೆಗಿಂತ ಶೇಕಡ 19ರಷ್ಟು ಮಳೆ ಹೆಚ್ಚಾಗಿದ್ದು ಜಿಲ್ಲೆಯಲ್ಲಿ ಬಸವಕಲ್ಯಾಣ ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗಿದೆ.

ಬೆಳೆ ಹಾನಿ ವಿವರ:
ಬೀದರ ಜಿಲ್ಲೆಯಲ್ಲಿ 19,305 ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿರುವ ಮಾಹಿತಿ ಲಭ್ಯವಾಗಿದೆ. 13,000 ಹೆಕ್ಟರ್ ಪ್ರದೇಶದಲ್ಲಿ ಹೆಸರು ಬೆಳೆ,1,366 ಆಕ್ಟರ್ ಪ್ರದೇಶದಲ್ಲಿ ಉದ್ದು ಬೆಳೆ ಹಾನಿ ಸಂಭವಿಸಿದೆ. 1,290 ಹೆಕ್ಟರ್ ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿದೆ. 3, 600 ಹೆಕ್ಟರ್ ಪ್ರದೇಶದಲ್ಲಿ ಸೋಯಾಬೀನ್ ಬೆಳೆ ಹಾನಿ ಯಾಗಿದೆ. 95 ಹೆಕ್ಟೇರ್ ಪ್ರದೇಶದಲ್ಲಿ ಎಳ್ಳು ಕಾಳು ಬೆಳೆ ಹಾನಿಯಾಗಿದೆ. ಬೆಳೆ ಹಾನಿ ಕುರಿತು ಇನ್ನು ಸಮೀಕ್ಷೆ ನಡೆದಿದ್ದು ಸಮೀಕ್ಷೆ ಪೂರ್ಣಗೊಂಡನಂತರ ಅಂತಿಮ ವರದಿ ಕೈಸೇರಲಿದೆ ಎಂದು ಸಚಿವರು ತಿಳಿಸಿದ್ದಾರೆ.
![]()
ರೈತರಿಗೆ ವಂಚನೆ ಆಗಬಾರದು:
ಬೆಳೆ ಹಾನಿಯ ಪರಿಹಾರ ರೈತರಿಗೆ ಸಿಗಬೇಕೆಂಬ ನಿಟ್ಟಿನಲ್ಲಿ ಕೃಷಿ ಅಧಿಕಾರಿಗಳು ತೊಟಗಾರಿಕೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದು, ರೈತರ ಬೆಳೆ ಹಾನಿ ಕುರಿತು ಸೂಕ್ತ ಮಾಹಿತಿ ಸಲ್ಲಿಸುವಂತೆ ತಿಳಿಸಲಾಗಿದೆ. ಎನ್.ಡಿ.ಆರ್.ಎಫ್ ನಿಯಮದಂತೆ ಬೆಳೆ ಹಾನಿ ಸಂಭವಿಸಿದ ರೈತರ ಖಾತೆಗೆ ಪರಿಹಾರ ಧನ ಸೇರುವಂತಾಗಬೇಕು. ಯಾವುದೇ ರೀತಿಯ ತಪ್ಪುಗಳಾದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಸಿದ್ದಾರೆ. ಬೆಳೆ ಸಮೀಕ್ಷೆಯಲ್ಲಿ ಯಾವುದೇ ಅವ್ಯವಹಾರಕ್ಕೆ ಆಸ್ಪದ ನೀಡಬಾರದು ಎಂದು ಕೂಡ ಕಟ್ಟುನಿಟ್ಟಿನ ಎಚ್ಚರಿಕೆ ಈಗಾಗಲೇ ಅಧಿಕಾರಿಗಳಿಗೆ ನೀಡಲಾಗಿದೆ ಎಂದರು.
www.kknewsonline.in 27-08-2020
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















