Home ನಿಮ್ಮ ಜಿಲ್ಲೆ ಬೀದರ ಮಾಸ್ಕ್ ಧರಿಸದಿದ್ದರೆ ಬೀಳುತ್ತೆ ದಂಡ.. ಬಂದ್ ಆಗುತ್ತೆ ಅಂಗಡಿ ಬಾಗಿಲು…

ಮಾಸ್ಕ್ ಧರಿಸದಿದ್ದರೆ ಬೀಳುತ್ತೆ ದಂಡ.. ಬಂದ್ ಆಗುತ್ತೆ ಅಂಗಡಿ ಬಾಗಿಲು…

ಮಾಸ್ಕ್ ಧರಿಸದಿದ್ದರೆ ಬೀಳುತ್ತೆ ದಂಡ.. ಬಂದ್ ಆಗುತ್ತೆ ಅಂಗಡಿ ಬಾಗಿಲು…

ಬೀದರ: ಬೀದರ ಜಿಲ್ಲೆಯಲ್ಲಿ ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರತಿಯೊಬ್ಬ ವ್ಯಾಪರಸ್ಥರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಬೀದರ್ ಜಿಲ್ಲೆಯಲ್ಲಿ ಮಾಸ್ಕ್ ಹಾಕದಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು, ವ್ಯಾಪಾರ ಪ್ರದೇಶಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಅಂಗಡಿಗಳ ಮಾಲೀಕರು ಕಡ್ಡಾಯವಾಗಿ ಮಾಸ್ ಧರಿಸಬೇಕು. ನಾಳೆಯಿಂದ ಜಿಲ್ಲೆಯಾದ್ಯಂತ ಪೊಲೀಸರ ಮೂಲಕ ದಂಡ ವಿಧಿಸುವ ಕಾರ್ಯ ಹಾಗೂ ಅಂಗಡಿಗಳು ಬಂದ್ ಮಾಡುವ ಕೆಲಸ ನಡೆಯಲಿದೆ. ಈ ಕುರಿತು ಈಗಾಗಲೇ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಮಾಸ್ಕ್ ಧರಿಸದ ವ್ಯಾಪಾರಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಮಾಸ್ಕ್ ಧರಿಸದ ಅಂಗಡಿಗಳು ಬಂದ್ ಮಾಡುವಂತೆ ತಿಳಿಸಲಾಗಿದೆ ಎಂದು ಸಚಿವರು ಹೇಳಿದರು.

www.kknewsonline.in   27-08-2020

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…