ಮೇ.2ಕ್ಕೆ ಮಲ್ಲಿಕಾರ್ಜುನ್ ಖರ್ಗೆ ಹುಮನಾಬಾದ ಭೇಟ
ಹುಮನಾಬಾದ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಮೇ.02ಕ್ಕೆ ಸಂಜೆ 4:00ಗೆ ಹುಮ್ನಾಬಾದ್ ಪಟ್ಟಣಕ್ಕೆ ಆಗಮಿಸಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಮಾಡಲ್ಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶಾಸಕ ರಾಜಶೇಖರ ಪಾಟಿಲ್ ತಿಳಿಸಿದ್ದಾರೆ.
ಚಿಟಗುಪ್ಪ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸಂಜೆ ಇತರೆ ಪಕ್ಷದ ಸದಸ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಮೇ.2ರಂದು ಸಂಜೆಗೆ ಥೇರ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೂಡ ಭಾಗವಹಿಸಲು ಮನವಿ ಮಾಡಿದ್ದೇನೆ. ಕ್ಷೇತ್ರದ ಹೆಚ್ಚಿನ ಜನರು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಕ್ಷೇತ್ರದ ಜನರು ಆಲೋಚನೆ ಮಾಡಿ ಮತ ಹಾಕಬೇಕಿದೆ.
ಕೆಲ ದಿನಗಳ ಹಿಂದೆ ಚಿಟಗುಪ್ಪ ಪಟಣಕ್ಕೆ ಅಗಮಿಸಿ ಪ್ರಚಾರ ನಡೆಸಿದ ಸಂಸದ ಭಗವಂತ ಅವರು, ಚಿಟಗುಪ್ಪ ಏನು ಅಭಿವೃದ್ಧಿಯಾಗಿದೆ ಎಂದು ಪ್ರಶ್ನಿಸಿದ್ದಾರೆ. ಚಿಟಗುಪ್ಪ ಹೊಸ ತಾಲೂಕು ಕೇಂದ್ರವಾಗಿದೆ. ವಿವಿಧ ಕಚೇರಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ವಿವಿಧ ಅಭಿವೃದ್ಧಿ ಕಾರ್ಯಗಳು ಇಲ್ಲಿ ನಡೆಯುತ್ತಿವೆ. ಬಿಜೆಪಿ ಪಕ್ಷದ ಯೋಗದಾನ ಏನಿದೆ ಇಲ್ಲಿ ಎಂದು ಮರು ಪ್ರಶ್ನಿಸಿದರು. ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡು ನಡೆಯುತ್ತಿದೆ. ಆ ಎರಡು ಪಕ್ಷದವರು ಪರಸ್ಪರ ಎಂದು ಆರೋಪ ಮಾಡಿಲ್ಲ ಆದರೆ ಇಬ್ಬರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತ್ರ ಆರೋಪ ಮಾಡುತ್ತಿದ್ದಾರೆ ಎಂದು ಜರಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಇದ್ದರು
ದಿನಾಂಕ: 30-04-2023 / 10:20am/ kknewsonline.in
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















