Home ನಿಮ್ಮ ಜಿಲ್ಲೆ ಬೀದರ ಲಾಕ್‌ಡೌನ್ ಜಾರಿ ಆದೇಶ ಕಟ್ಟುನಿಟ್ಟಿನ ಕ್ರಮವಹಿಸಲು ತಾಲೂಕಾಡಳಿತಕ್ಕೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು

ಲಾಕ್‌ಡೌನ್ ಜಾರಿ ಆದೇಶ ಕಟ್ಟುನಿಟ್ಟಿನ ಕ್ರಮವಹಿಸಲು ತಾಲೂಕಾಡಳಿತಕ್ಕೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು

ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ

ಲಾಕ್‌ಡೌನ್ ಜಾರಿ ಆದೇಶ ಕಟ್ಟುನಿಟ್ಟಿನ ಕ್ರಮವಹಿಸಲು ತಾಲೂಕಾಡಳಿತಕ್ಕೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು

ಬೀದರ: ಜಿಲ್ಲೆಯಲ್ಲಿ ಜಾರಿಮಾಡಿದ ಲಾಕ್‌ಡೌನ್ ನಿಯಮಗಳು ಹಾಗೂ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ತಾಲೂಕು ಮಟ್ಟದ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್.ಆರ್  ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ 15ರಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಬೀದರ ಜಿಲ್ಲಾದ್ಯಂತ ಜುಲೈ 15ರಿಂದಲೇ ಷರತ್ತುಬದ್ಧ ಲಾಕ್‌ಡೌನ್ ಕಟ್ಟುನಿಟ್ಟಾಗಿ ಜಾರಿಗೆ ಕ್ರಮ ವಹಿಸಬೇಕಿದೆ ಎಂದು ಸೂಚಿಸಿದರು.

ಹಲ್ಲೆ ಮಾಡಿದರೆ ಕಠಿಣ ಕ್ರಮ:
ಲಾಕ್‌ಡೌನ್ ಹಿನ್ನೆಲೆಯಲ್ಲಿ ಈಗಾಗಲೇ ಸಾರ್ವಜನಿಕರು ಹಲವಾರು ಮಾರ್ಗಸೂಚಿಗಳನ್ನು ಪಾಲಿಸಲು ತಿಳಿಸಲಾಗಿದೆ. ಆದಾಗ್ಯೂ ಜನರು ಜಿಲ್ಲಾಡಳಿತ ಇಲ್ಲವೇ ತಾಲೂಕಾಡಳಿತ ಆದೇಶಗಳನ್ನು ಮತ್ತು ನಿಯಮಗಳನ್ನು ಪಾಲಿಸದಿದ್ದರೆ ತಿಳಿ ಹೇಳಬೇಕು. ಮತ್ತೆ ಮತ್ತೆ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ತಿಳಿಸಿದರು. ಸರ್ಕಾರಿ ನೌಕರರು ಮತ್ತು ವ್ಶೆದ್ಯಾಧಿಕಾರಿಗಳ ಮೇಲೆ ಯಾರಾದರು ಹಲ್ಲೆ ಮಾಡಿದರೆ ಅಂತವರ ಮೇಲೆ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಕೂಡಲೆ ಮಾಹಿತಿ ನೀಡಿ:ಜಿಲ್ಲೆಯಲ್ಲಿ ಯಾವುದೇ ಮದುವೆ, ಇನ್ನೀತರ ಸಭೆ ಸಮಾರಂಭಗಳು ಏರ್ಪಡಿಸಿದಲ್ಲಿ ಕಡ್ಡಾಯವಾಗಿ ಅದೇ ದಿನದಂದು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲು ತಿಳಿಸಿದರು.

ಸರಕು ಸಾಗಣೆ ಮುಕ್ತ ಅವಕಾಶ:ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಅವರು ಮಾತನಾಡಿ, ಲಾಕ್‌ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಅಡ್ಡಾಡದಂತೆ ನೋಡಿಕೊಳ್ಳಬೇಕು. ಮತ್ತು  ತುರ್ತು ಪರಿಸ್ಥಿತಿಯಲ್ಲಿ ಅವಶ್ಯವಾಗಿರುವ ಸರಕು ಸಾಗಣೆ ವಾಹನಗಳಿಗೆ ಯಾವುದೇ ತೊಂದರೆ ಮಾಡದಂತೆ ಕ್ರಮ ವಹಿಸಲು ತಾಲೂಕುಮಟ್ಟದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಗ್ಯಾನೇಂದ್ರಕುಮಾರ ಗಂಗವಾರ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬೀದರ ಸಹಾಯಕ ಆಯುಕ್ತರಾದ ಅಕ್ಷಯ್ ಶ್ರೀಧರ್, ಬೀದರ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶರಣಬಸಪ್ಪ ಕೋಟಪ್ಪಗೋಳ, ಪೌರಾಯುಕ್ತರಾದ ಬಿ.ಬಸಪ್ಪ, ಡಿಎಚ್‌ಓ ಡಾ.ವಿ.ಜಿ.ರೆಡ್ಡಿ, ಡಿ.ಎಸ್.ಓ ಡಾ.ಕೃಷ್ಣಾ ರೆಡ್ಡಿ ಹಾಗೂ ಇತರರು ಇದ್ದರು

Date: 15-07-2020  www.kknewsonline.in

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …