Home ನಿಮ್ಮ ಜಿಲ್ಲೆ ಬೀದರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಬೇಕೆ ಇಲ್ಲಿದೆ ಮಾಹಿತಿ

ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಬೇಕೆ ಇಲ್ಲಿದೆ ಮಾಹಿತಿ

ಬೀದರ: ಬೀದರ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಎನ್.ಎಂ.ಓಲೇಕಾರ ಹಾಗೂ ಪೊಲೀಸ್ ಇನ್ಸಪೆಕ್ಟರ್ ಶಿವಕುಮಾರ ಮುಚ್ಚಂಡಿ ಅವರು ಅ.23ರಿಂದ 25ರವರೆಗೆ ಜಿಲ್ಲೆಯ ಹುಲಸೂರ, ಕಮಲನಗರ ಮತ್ತು ಚಿಟ್ಟಗುಪ್ಪಾ ತಾಲೂಕಗಳಿಗೆ ಭೇಡಿ ನೀಡಿ ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸುವರು

ಅ. 23ರ ಬೆಳಗ್ಗೆ 11ರಿಂದ ಮಧ್ಯಾಹ್ನ 1 ರವರೆಗೆ ಹುಲಸೂರು ತಾಲೂಕು ಕಚೇರಿ, ಅ.24ರ ಬೆಳಗ್ಗೆ 11ರಿಂದ ಮಧ್ಯಾಹ್ನ 1 ರವರೆಗೆ ಕಮಲನಗರ ತಾಲೂಕು ಕಚೇರಿ ಮತ್ತು ಅ.25 ರ ಬೆಳಗ್ಗೆ 11ರಿಂದ ಮಧ್ಯಾಹ್ನ ೧1 . ಈ ಸಭೆಯಲ್ಲಿ ತಾಲೂಕು ಆಡಳಿತ ಅಧಿಕಾರಿಗಳು ಹಾಜರಿರುವರು.

ಈ ಮೇಲ್ಕಂಡ ದಿನಾಂಕಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲೂ ಕಚೇರಿಯ ವೇಳೆಯಲ್ಲಿ ಸಾರ್ವಜನಿಕರು ತಮ್ಮ ದೂರುಗಳನ್ನು ಕರ್ನಾಟಕ ಲೋಕಾಯುಕ್ತ ಕಚೇರಿ, ಅಂಬೇಡ್ಕರ್ ಸರ್ಕಲ್ ಹತ್ತಿರ, ಬೀದರ್ ಈ ವಿಳಾಸಕ್ಕೆ ಬಂದು ನೇರವಾಗಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08482-221445, 227630, ಲೋಕಾಯುಕ್ತ ಅಧಿಕಾರಿಗಳು ಅಥವಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಉಪಾಧೀಕ್ಷಕರಾದ ಎನ್.ಎಂ.ಓಲೇಕಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…