ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
ಬೀದರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬದಲಾವಣೆ ಕುರಿತು ಮಾತನಾಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಕ್ತಾರರೇ ಅಥವಾ ಪಕ್ಷದ ಹೈಕಮಾಂಡಾ? ಸಿಎಂ ಬದಲಾವಣೆ ಕುರಿತು ಮಾತನಾಡಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಬೃಹತ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು.
ಸೋಮವಾರ ಬೀದರ ನಗರಕ್ಕೆ ಭೇಟಿನೀಡಿದ ಬೃಹತ್ ಕೈಗಾ9ರಿಕಾ ಸಚಿವ ಜಗದೀಶ್ ಶೆಟ್ಟರ್ ಸುದ್ದಿಗೊಷ್ಠಿನಡೆಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್ ಅಧೋಗತಿ ಹೋಗುತ್ತಿದೆ. ಬಿಜೆಪಿ ವಿರುದ್ಧ ಮಾತನಾಡಲು ವಿಷಯಗಳಿಲ್ಲ ಕಾರಣ ಇಲ್ಲ ಸಲದ ಬೇಕಾಬಿಟ್ಟಿ ಮಾತನಾಡುತ್ತಿದ್ದಾರೆ ಎಂದು ಹೇಳಿದ ಅವರು, ಸಿದ್ದರಾಮಯ್ಯ ಅವರು, ಬಿಜೆಪಿ ವಕ್ತಾರರೇ? ಇವರೇನು ಬಿಜೆಪಿ ಹೈಕಮಾಂಡಾ ಎಂದು ಪ್ರಶ್ನಿಸಿದರು.
ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಯಡಿಯೂರಪ್ಪ ಅವರೇ ಮುಂದಿನ ಎರಡುವರೆ ವರ್ಷ ಸಿಎಂ ಅಗಿ ಮುಂದುವರೆಯಲಿದ್ದಾರೆ. ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ ಇದೆ. ಎಷ್ಟು ಜನ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದನ್ನು ಅವರೇ ನಿರ್ಣಯಿಸಲಿದ್ದಾರೆ.
ಸಿದ್ದರಾಮಯ್ಯ ಅವರು ಮೊದಲು ಅವರ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆಗೆ ಸಂಬಂಧ ಸುಧಾರಿಸಿಕೊಳ್ಳಿ,ಗ್ರಾಪಂ ಚುನಾವಣೆಯಲ್ಲಿ ಸೋತು ಸುಣ್ಣ ವಾಗಿದ್ದಿರಿ. ಮುಖ್ಯಮಂತ್ರಿ ವಿರುದ್ಧ ಮಾತನಾಡಲಿಕ್ಕೆ ಯಾವುದೆ ನೈತಿಕ ಹಕ್ಕಿಲ್ಲ ಎಂದು ಗುಡುಗಿದರು.
Date: 11-01-2021 : www.kknewsonline.in
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…

















