ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪಾಟೀಲ ಒತ್ತಾಯ.

ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪಾಟೀಲ ಒತ್ತಾಯ
ಹುಮನಾಬಾದ: ತಾಲೂಕಿನ ಹುಡಗಿ ಗ್ರಾಮದಿಂದ ಹಾದು ಹೋಗಿರುವ ರಾಷ್ಟಿçಯ ಹೆದ್ದಾರಿ 65ರಲ್ಲಿ ನಿರ್ಮಾಣ ಮಾಡಬೇಕಿದ ಸರ್ವಿಸ್ ರಸ್ತೆ ಕುರಿತು ಸಾರ್ವಜನಿಕರಿಗೆ ಹಾಗೂ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಬಿಜೆಪಿ ಮುಖಂಡ ಸೋಮನಾಥ ಪಾಟೀಲ ಒತ್ತಾಯಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಹುಡಗಿ ಗ್ರಾಮದ ಹತ್ತಿರದ ಸ್ಮಶಾನ ಭೂಮಿ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ಇದೆ ಎಂದು ಕಳೆದ ಅನೇಕ ವರ್ಷಗಳಿಂದ ಸರ್ವಿಸ್ ರಸ್ತೆ ನಿರ್ಮಾಣ ಮಾಡದೆ ಹಾಗೇ ಬಿಟ್ಟಿದ್ದಾರೆ. ಆದರೆ, ವಾಸ್ತವದಲ್ಲಿ 2015ರಲ್ಲಿಯೇ ನ್ಯಾಯಾಲಯವು ತಡೆಯಾಜ್ಞೆ ಕೊನೆಗೊಂಡಿದ್ದು, ನ್ಯಾಯಾಲಯದ ಅಭಿಯೋಜಕರು ಸದರಿ ಸರ್ವಿಸ್ ರಸ್ತೆಯನ್ನು ನಿರ್ಮಿಸಬಹುದೆಂದು ಲಿಖಿತವಾಗಿ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿಗಳಿಗೆ ತಿಳಿಸಿದ್ದು, ಇಂದಿಗೂ ಕಾಮಗಾರಿ ಆರಂಭಿಸಲು ಅಧಿಕಾರಿಗಳು ಮುಂದಾಗಿಲ್ಲ.
ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿರುವ ಹೆದ್ದಾರಿ ಪ್ರಾಧಕಾರ ಹಾಗೂ ಎಲ್ಆ್ಯಂಡ್ಟಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಮುಂದಿನ 15 ದಿನಗಳಲ್ಲಿ ಸರ್ವಿಸ್ ರಸ್ತೆ ಕಾಮಗಾರಿ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















