Home ನಿಮ್ಮ ಜಿಲ್ಲೆ ಬೀದರ ಹೊಸ ತಾ.ಪಂ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ಪ್ರಕಟ.

ಹೊಸ ತಾ.ಪಂ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ಪ್ರಕಟ.

ಹೊಸ ತಾಲೂಕುಗಳ ತಾ.ಪಂ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ಪ್ರಕಟ.

ಬೀದರ: ಜಿಲ್ಲೆಯ ಮೂರು ಹೊಸ ತಾಲೂಕು ಕೇಂದ್ರಗಳಲ್ಲಿ ಸ್ಥಾಪನೆಯಾದ ತಾಲೂಕು ಪಂಚಾಯತಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಅಧಿಸೂಚನೆ ಹೊರಡಿಸಿ ಮೂರು ತಾಲೂಕು ಪಂಚಾಯತಗಳಿಗೆ ಮೀಸಲಾತಿ ಪ್ರಕಟಿಸಿದೆ.

14-10-2019ರಂದು ಹೊಸದಾಗಿ ರಚನೆಯಾಗಿರುವ ತಾಲೂಕುಗಳಾದ ಕಮಲನಗರ, ಚಿಟಗುಪ್ಪ ಹಾಗೂ ಹುಲಸೂರ ತಾಲೂಕುಗಳ ತಾ.ಪಂಗಳಿಗೆ ಮೀಸಲಾತಿ ಪ್ರಕಟಿಸಲಾಗಿದೆ. ಕಮಲನಗರ ತಾಲೂಕು ಪಂಚಾಯಷತಿಯ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ(ಮಹಿಳೆ). ಚಿಟಗುಪ್ಪ ತಾಲೂಕು ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಪಂಗಡ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ(ಮಹಿಳೆ) ಹಾಗೂ ಹುಲಸೂರ ತಾ.ಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಪ್ರವರ್ಗ-(ಮಹಿಳೆ)ಗೆ ಮೀಸಲಾತಿ ನೀಡಲಾಗಿದೆ. 5 ವರ್ಷ ಅವಧಿಯ ಉಳಿದ ಭಾಗಕ್ಕೆ ಮಾತ್ರ ಈ ಮೀಸಲಾತಿ ಅನ್ವಯ ಆಗಲ್ಲಿದೆ.

 

Date: 20-06-2020 www.kknewsonline.in

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…