Home ನಿಮ್ಮ ಜಿಲ್ಲೆ ಬೀದರ ಅಪರಿಚಿತ ವ್ಯಕ್ತಿಯ ಶವ ಪತ್ತೆ – ಕೊಲೆ ಶಂಕೆ

ಅಪರಿಚಿತ ವ್ಯಕ್ತಿಯ ಶವ ಪತ್ತೆ – ಕೊಲೆ ಶಂಕೆ

ಅಪರಿಚಿತ ವ್ಯಕ್ತಿಯ ಶವ ಪತ್ತೆ – ಕೊಲೆ ಶಂಕೆ

ಬೀದರ: ಹುಮನಾಬಾದ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಬೆಳಗಿನ ಜಾವ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು, ಪ್ರಯಾಣಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ.

ಸುಮಾರು 30 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ವ್ಯಕ್ತಿಯ ಬಳಿ ಯಾವುದೇ ಗುರುತಿನ ದಾಖಲೆಗಳು ಪತ್ತೆಯಾಗಿಲ್ಲ.ಮೃತ ವ್ಯಕ್ತಿಯ ಹೊಟ್ಟೆಯ ಕೆಳಭಾಗದಲ್ಲಿ ಹರಿತ ವಸ್ತುವಿನಿಂದ ಚುಚ್ಚಿರುವ ಗಾಯಗಳು ಕಂಡು ಬಂದಿವೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ವ್ಯಕ್ತಿಯ ಬಲಗೈಯಲ್ಲಿ SF ಎಂದು ಟ್ಯಾಟೂ ಹಾಕಲಾಗಿದೆ.

ಮೇಲ್ನೋಟಕ್ಕೆ ಇದೊಂದು ಕೊಲೆ ಪ್ರಕರಣ ಎಂದು ಸಂಶಯ ವ್ಯಕ್ತಪಡಿಸಿ ಹುಮನಾಬಾದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ವ್ಯಕ್ತಿಯ ಗುರುತು ಪತ್ತೆಗಾಗಿ ಶೋಧ ನಡೆಸುತ್ತಿದ್ದು, ವ್ಯಕ್ತಿಯನ್ನು ಗುರುತಿಸುವವರು ಹುಮನಾಬಾದ್ ಪೊಲೀಸ್ ಠಾಣೆಗೆ(9480803452) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

 

Date: 24-05-2022 : www.kknewsonline.in

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …