ಆಸ್ಪತ್ರೆ ಸುಧಾರಣೆಗೆ ವೈದ್ಯರ ವರ್ಗಾವಣೆ ಅಗತ್ಯ..
ಕೆಡಿಪಿ ಸಭೆಯಲ್ಲಿ ಆರೋಗ್ಯ ಅಧಿಕಾರಿಗಳಿಗೆ ಛೀಮಾರಿ
ಬೀದರ: ನಗರದಲ್ಲಿ ಸರ್ಕಾರಿ ಜಿಲ್ಲಾ ಆಸ್ಪತ್ರೆ (ಬ್ರಿಮ್ಸ್) ಸುಧರಿಸಬೇಕಾದರೆ ಇಲ್ಲಿನ ಸ್ಥಳಿಯ ವೈದ್ಯರನ್ನು ಬೇರೆಡೆಗೆ ವರ್ಗಾವಣೆ ಮಾಡುವುದು ಸೂಕ್ತ ಎಂಬ ಅಭಿಪ್ರಾಯಗಳು ಶುಕ್ರವಾರ ನಡೆದ ಸಭೆಯಲ್ಲಿ ಅನೇಕ ಅಭಿಪ್ರಾಯ ವ್ಯಕ್ತಪಡಿಸಿದ ಘಟನೆ ನಡೆಯಿತು.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿಚ ಪ್ರಭು ಚವ್ಹಾಣ್ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶಿಲಾ ಸಭೆಯಲ್ಲಿ ಜಿಲ್ಲಾ ಆಸ್ಪತ್ರೆಯ ಕಾರ್ಯ ಚಟುವಟಿಕೆಗಳ ಕುರಿತು ಚರ್ಚೆನಡೆಸುತ್ತಿರುವ ಸಂದರ್ಭದಲ್ಲಿ ಈ ಮೇಲಿನ ವಿಷಯ ಚರ್ಚೆಗೆ ಬಂತು.
ಆಸ್ಪತ್ರೆಯ ಅಭಿವೃದ್ಧಿ ಕಾರ್ಯಗಳ ಕುರಿತು ಆಸ್ಪತ್ರೆಯ ಅಧಿಕಾರಿ ಮಾಹಿತಿ ನೀಡುತ್ತಿರುವ ಸಂದರ್ಭದಲ್ಲಿ ಎಂ.ಎಲ್.ಸಿ ಅರವಿಂದ ಅರಳಿ, ಶಾಸಕ ರಹೀಮ್ ಖಾನ ಸೇರಿದಂತೆ ಇತರರು ಆಸ್ಪತ್ರೆಯಲ್ಲಿ ಜನರಿಗೆ ಸೂಕ್ತ ಸೌಲಭ್ಯಗಳು ದೊರೆಯುತ್ತಿಲ್ಲ ಎಂಬದೂರುಗಳು ಬರುತ್ತಿವೆ. ಈ ಹಿಂದೆ ಆಸ್ಪತ್ರೆಗೆ ಭೇಟಿನೀಡಿ ಪರಿಶೀಲನ ಕೂಡ ನಡೆಸಿದರು ಕೂಡ ಯಾವ ಬದಲಾವಣೆ ಆಗಿಲ್ಲ ಎಂದು ದೂರಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಇಲ್ಲಿನ ಸ್ಥಳಿಯ ವೈದ್ಯರನ್ನು ಭೇರೆಡೆಗೆ ವರ್ಗಾವಣೆ ಮಾಡಿದರೆ ಮಾತ್ರ ಸುಧಾರಣೆ ಸಾಧ್ಯ ಎಂಬ ತಮ್ಮ ಅಭಿಪ್ರಾಯ ಮಂಡಿಸಿದರು. ಇದಕ್ಕೆ ಸಂಸದ ಭಗವಂತ ಖೂಬಾ ಕೂಡ ಸೂಕ್ತ ಸಲಹೆ ಎಂದರು.
ಜಬ್ಬಾರಗೆ ತರಾಟೆ: ಆರೋಗ್ಯ ಇಲಾಖೆಯಲ್ಲಿನ ಸಮಸ್ಯೆಗಳು ಸೂಕ್ತವಾಗಿ ನಿಭಾಯಿಸಲು ಜಿಲ್ಲಾ ಆರೋಗ್ಯ ಅಧಿಕಾರಿ ಸೂಕ್ತವಾಗಿ ಕೆಲಸ ಮಾಡುತ್ತಿಲ್ಲ ಎಂಬುವುದು ಗೊತ್ತಾಗುತ್ತದೆ. ಯಾವ ಆಸ್ಪತ್ರೆಯಲ್ಲಿ ಎನ್ನು ಸಮಸ್ಯೆ ಇದೆ. ಸಮಸ್ಯೆ ಕಂಡಲ್ಲಿ ಯಾವ ಕಠಿಣ ಕ್ರಮ ಕೈಗೊಂಡಿದ್ದಿರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರೋಗ್ಯ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ಘಟನೆ ಕೂಡ ನಡೆಯಿತು.
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















