Home ನಿಮ್ಮ ಜಿಲ್ಲೆ ಬೀದರ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಶಾಸಕ ಪಾಟೀಲರಿಂದ ಉಚಿತ ಮಾಸ್ಕ್.

ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಶಾಸಕ ಪಾಟೀಲರಿಂದ ಉಚಿತ ಮಾಸ್ಕ್.

ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಹೆದರಿಕೆ ಬೇಡ ಜಾಗೃತಿ ವಹಿಸಿ-ಶಾಸಕ ಪಾಟೀಲ ಸಲಹೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಶಾಸಕ ಪಾಟೀಲರಿಂದ ಉಚಿತ ಮಾಸ್ಕ್.

ಹುಮನಾಬಾದ: ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ಮತ್ತು ಪಾಲಕರು ಹೆದರಬಾರದು ಆದರೆ, ಜಾಗ್ರತೆವಹಿಸಿ ಪರೀಕ್ಷೆ ಬರೆಯಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಸಲಹೆ ನೀಡಿದ್ದಾರೆ.

ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಪರೀಕ್ಷಾ ಕೇಂದ್ರ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಸರ್ಕಾರ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಪೂರ್ವಸಿದ್ಧತೆಗಳು ಮಾಡಿಕೊಂಡಿದೆ. ವಿದ್ಯಾರ್ಥಿಗಳು ಹಾಗೂ ಪಾಲಕರು ಯಾವುದೇ ಕಾರಣಕ್ಕೂ ಹೆದರುವ ಅವಶ್ಯಕತೆ ಇಲ್ಲ. ಪರೀಕ್ಷೆಗೆ ಹಾಜರಾಗುವ ಮುನ್ನ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಗಂಟೆಗೆ ಒಂದು ಬಾರಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಹ್ಯಾಂಡ್ ಸ್ಯಾನಿಟೈಸರ್ ಬಳಸುಂತೆ ಅಧಿಕಾರಿಗಳಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಮಕ್ಕಳ ಹಿತದೃಷ್ಟಿಯಿಂದ ವೈಯಕ್ತಿಕವಾಗಿ ಚಿಟಗುಪ್ಪ ಹಾಗೂ ಹುಮನಾಬಾದ ತಾಲೂಕು ಕೇಂದ್ರಗಳ ಒಟ್ಟು 18 ಪರೀಕ್ಷಾ ಕೇಂದ್ರಗಳ ಸುಮಾರು 5569 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಉಚಿತ ಮಾಸ್ಕ್  ವಿತರಣೆ ಮಾಡುತ್ತಿದ್ದೇನೆ. ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮಾಸ್ಕ್ ಧರಿದೇ ಪರೀಕ್ಷೆಗೆ ಬರುವ ಎಲ್ಲಾ ಮಕ್ಕಳಿಗೆ ಮಾಸ್ಕ್ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಗೊಂಡಪ್ಪ ಸಿದ್ದನಗೊಳ್ಳ, ಶಿವಕುಮಾರ ಪಾರಶೆಟ್ಟಿ, ಪಶು ಇಲಾಖೆಯ ಡಿಡಿ ಡಾ। ಗೊಂವಿದ್, ವೀರತರೆಡ್ಡಿ ಜಂಪಾ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

Date: 23-06-2020   www.kknewsonline.in

 

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…