Home ನಿಮ್ಮ ಜಿಲ್ಲೆ ಬೀದರ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಮಾಡಿಕೊಳಿ-ಸಚಿ ವಚವ್ಹಾಣ್

ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಮಾಡಿಕೊಳಿ-ಸಚಿ ವಚವ್ಹಾಣ್

ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಮಾಡಿಕೊಳಿ-ಸಚಿ ವಚವ್ಹಾಣ್

ಬೀದರಃ ಪ್ರತಿ ವರ್ಷದಂತೆ ಈ ವರ್ಷ ಕೂಡ ಬೀದರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಅಚ್ಚುಕಟ್ಟಾಗಿ ಮತ್ತು ಕಾಪಿ ಮುಕ್ತವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹೇಳಿದರು.

ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜೂನ್ 19 ರಂದು ನಡೆದ ಜೂನ್-ಜುಲೈ-2020ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪೂರ್ವಸಿದ್ಧತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್-19 ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ  ಪರೀಕ್ಷೆಗಳು ಜಿಲ್ಲಾದ್ಯಂತ ಭಯ ಮುಕ್ತವಾಗಿ ನಡೆಯಬೇಕು. ವಿದ್ಯರ‍್ಥಿಗಳು ಧರ‍್ಯದಿಂದ ಪರೀಕ್ಷೆ ಬರೆದಲ್ಲಿ ಪರೀಕ್ಷಾ ಫಲಿತಾಂಶದಲ್ಲಿ ಬೀದರ ಜಿಲ್ಲೆಗೆ ಉತ್ತಮ ಸ್ಥಾನ ಲಭ್ಯವಾಗಲಿದೆ ಎಂದು  ತಿಳಿಸಿದರು.

ಬೀದರ ಜಿಲ್ಲೆಯಲ್ಲಿ ಜೂನ್ ೨೫ರಿಂದ ಜುಲೈ 4ರ ವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 26,882 ವಿದ್ಯರ‍್ಥಿಗಳು ಹಾಜರಾಗುತ್ತಿದ್ದಾರೆ. 99 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಇದೆ ವೇಳೆ ಪದವಿ ಪರ‍್ವ ಶಿಕ್ಷಣ ಇಲಾಖೆಯ ಉಪ ನರ‍್ದೇಶಕರಾದ ಎಚ್.ಸಿ.ಚಂದ್ರಶೇಖರ  ಸಭೆಗೆ ಮಾಹಿತಿ ನೀಡಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಮಾಸ್ಕಗಳು ಮತ್ತು ಸ್ಯಾನಿಟೈಜರ್ ವಿತರಿಸಲಾಗಿದೆ. 200 ವಿದ್ಯಾರ್ಥಿಗಳಿಗೆ ಒಂದರಂತೆ ಥರ್ಮಲ್ ಸ್ಕ್ರಿನಿಂಗ್ ವ್ಯವಸ್ಥೆಮಾಡಲಾಗಿದ್ದು, 99 ಮುಖ್ಯ ಪರೀಕ್ಷಾ ಕೇಂದ್ರಗಳಲ್ಲಿ 2 ರಂತೆ ಹಾಗೂ ಬ್ಲಾಕ್ ಪರೀಕ್ಷಾ ಕೇಂದ್ರಗಳಲ್ಲಿ ಒಂದರಂತೆ 218 ಥರ್ಮಲ್ ಸ್ಕ್ರಿನಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನರ‍್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ ಹಾಗೂ ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಿಕ್ಷಣ ಇಲಾಖೆಯ ಇನ್ನೀತರ ಅಧಿಕಾರಿಗಳು ಇದ್ದರು.

Date:19-06-2020  WWW>KKNEWSONLINE.IN

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…