ಕಲ್ಯಾಣ ಕರ್ನಾಟಕಕ್ಕೆ ಬಂಪರ್
ಪಶು ಇಲಾಖೆಯಲ್ಲಿ ಭರ್ತಿಯಾಗಲಿವೆ176 ಖಾಲಿ ಹುದ್ದೆ
Date:01-11-2019
ಬೀದರ: 176 ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲು ಸಚಿವ ಸಂಪುಟದ ಒಪ್ಪಿಗೆ ನೀಡಿದೆ. ಹಲವು ವರ್ಷಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ನನೆಗುದಿಗೆ ಬಿದ್ದಿದ್ದ ಪಶುಸಂಗೋಪನೆ ಇಲಾಖೆಯಲ್ಲಿನ ಹುದ್ದೆಗಳನ್ನು ತುಂಬಿಕೊಳ್ಳಲು ಅಕ್ಟೋಬರ್ 31ರಂದು ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಪಶು ಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹೇಳಿದರು.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನವೆಂಬರ್ ೧ರಂದು ನಡೆದ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ ಬಗ್ಗೆ ನಾನು ಮುಖ್ಯಮಂತ್ರಿಗಳೊಂದಿಗೆ ಹಲವು ಬಾರಿ ಚರ್ಚಿಸಿದ್ದೆ. ಖಾಲಿ ಇರುವ ಹುದ್ದೆಗಳನ್ನು ಶ್ರೀಘ್ರದಲ್ಲಿ ತುಂಬಿಕೊಳ್ಳುಲು ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಭರವಸೆ ನೀಡಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಕೆಲವೇ ತಿಂಗಳಲ್ಲಿ ಹುದ್ದೆಗಳ ಭರ್ತಿಗೆ ಒಪ್ಪಿಗೆ ದೊರಕಿರುವುದು ಅತ್ಯಂತ ಸಂತೋಷ ತಂದಿದೆ. ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಸಂವಿಧಾನದ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದವರಿಗೆ ಮೀಸಲಾಗಿರುವ 61 ಪಶುವೈದ್ಯ ಹುದ್ದೆಗಳನ್ನು,32 ಪಶುವೈದ್ಯ ಪರೀಕ್ಷಕರು ಹುದ್ದೆಗಳನ್ನು ಹಾಗೂ 83ಪಶುವೈದ್ಯಕೀಯ ಸಹಾಯಕ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಮೂಲ ವೃಂದದ ಒಟ್ಟು ವೃಂದದ ಬಲದಲ್ಲಿ ೩೭೧ಜೆ ಅಡಿಯಲ್ಲಿ ಸ್ಥಳೀಯ ವೃಂದದಲ್ಲಿ ಶೇ 75 ಪ್ರಮಾಣದಲ್ಲಿ ಮೀಸಲಿರಿಸಿದ 61 ಪಶುವೈದ್ಯ ಹುದ್ದೆಗಳನ್ನು, 32 ಪಶುವೈದ್ಯ ಪರೀಕ್ಷಕರು ಹುದ್ದೆಗಳನ್ನು ಹಾಗೂ 83 ಪಶುವೈದ್ಯಕೀಯ ಸಹಾಯಕ ಹುದ್ದೆಗಳ ನೇರ ನೇಮಕಾತಿ ಮೂಲಕ ತುಂಬಿಕೊಳ್ಳಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ಮತ್ತು ಉದ್ಯೋಗ ಸೃಷ್ಠಿಗೆ ಇನ್ನೂ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಕನ್ನಡ ಭವನ ನಿರ್ಮಾಣ ಅನುದಾನ ಕೋರಿ ಪ್ರಸ್ತಾವನೆ:
ಬೀದರನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಮೊದಲ ಹಂತದ 50 ಲಕ್ಷ ರೂ.ಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನವೆಂಬರ್ ತಿಂಗಳನಲ್ಲೇ ಅದು ಬಿಡುಗಡೆಯಾಗುವಂತೆ ಪ್ರಯತ್ನ ಮಾಡುತ್ತೇನೆ. ಅಲ್ಲದೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಅಲ್ಲಿನ ತಹಸಿಲ್ದಾರರು ಭೂಮಿ ಮಂಜೂರಾತಿಗಾಗಿ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ ಮಾಲಾಗುವುದು, ಯಾವ ತಾಲೂಕಿನಲ್ಲಿ ಕನ್ನಡ ಭವನಕ್ಕೆ ಭೂಮಿ ಇಲ್ಲವೊ ಅಂತಹ ಕಡೆಗಳಲ್ಲಿ ಅಧಿಕಾರಿಗಳು ಕೂಡಲೇ ಭೂಮಿ ಮಂಜುರಾತಿಗೆ ಮುಂದಾಗಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು.
ಬಿಎಸ್‌ಎಸ್‌ಕೆ ಕುರಿತು ಮುಖ್ಯಮಂತ್ರಿ ಭೇಟಿ
ಜಿಲ್ಲೆಯ ಬೀದರ ಸಹಕಾರ ಸಕ್ಕರೆ ಕಾರ್ಖಾನೆಯ ಆರಂಭ ಕುರಿತು ಅಧಿಕಾರಿಗಳ ಜತೆಗೆ ಸಭೆ ನಡೆಸುತ್ತೆÃನೆ ನಂತರ ಈ ಕುರಿತು ರಾಜ್ಯದ ಮುಖ್ಯಮಂತ್ರಿಗಳಿಗೆ ಭೇಟಿಮಾಡಿ ಕಾರ್ಖಾನೆ ಆರಂಭಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. ಈ ಮಧ್ಯದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಒಂದೇ ದಿನದಲ್ಲಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ. ಹಂತಹಂತವಾಗಿ ಎಲ್ಲಾ ಕಡೆಗಳಲ್ಲಿ ಗಮನ ಹರಿಸಿ ಸುಧಾರಣೆ ಮಾಡಲಾಗುವುದು ಎಂದರು.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…