ಕಳ್ಳರನ್ನು ಬಂಧಿಸಿದ ಪೊಲೀಸರು
ಹುಮನಾಬಾದ: ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಶಯಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದ ಕಳ್ಳರನ್ನು ಹುಮ್ನಾಬಾದ್ ಪೊಲೀಸರು ಬಂಧಿಸಿದ್ದಾರೆ.
ಜೇವರ್ಗಿ ತಾಲೂಕಿನ ಬಿರಾಳ (ಕೆ) ಮೂಲದ ಸಚ್ಚಿನ ಬಂಧಿತ ಆರೋಪಿ. ಇನ್ನೊಬ್ಬ ಆರೋಪಿ ಶಿವಕುಮಾರ ಪರಾರಿ ಯಾಗಿದ್ದು ಪೊಲೀಸರು ಬಂಧಿಸಲು ಜಾಲ ಬೀಸಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ ಪಿಎಸ್ಐ ರವಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಬಂಧಿತ ಆರೋಪಿಯಿಂದ ಆರೋಪಿಯಿಂದ 6 ದ್ವಿಚಕ್ರ ವಾಹನಗಳು ಐದು ಗ್ರಾಂ ಚಿನ್ನದ ಕಿವಿಯೋಲೆ ವಶಪಡಿಸಿಕೊಂಡಿದ್ದಾರೆ. ಆರು ದಿಚಕ್ರ ವಾಹನಗಳಲ್ಲಿ ಎರಡು ದ್ವಿಚಕ್ರ ವಾಹನಗಳು ಹುಮ್ನಾಬಾದ್ ದಿಂದ ಕಳ್ಳತನ ಮಾಡಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …

















