ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ಐದು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್
ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ಐದು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್
ಬೀದರ:ಜನವರಿ 13; ಹುಮನಾಬಾದ ಪಟ್ಟಣದ ವಾಂಜರಿ ಬಡಾವಣೆಯ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ಐದು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ.
ಒಂದೇ ಕಟ್ಟಡದಲ್ಲಿ ವಸತಿ ಶಾಲೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಕಾರ್ಯ ನಿರ್ವಹಿಸುತ್ತಿದ್ದು, ಕುತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಒಟ್ಟಾರೆ 230 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿ ಅನುಸಾರ ಕಳೆದ ವಾರ ವಸತಿ ನಿಲಯ ವಿದ್ಯಾರ್ಥಿಗಳು ಕೊವೀಡ್ ಲಸಿಕೆ ಕೂಡ ಪಡೆದುಕೊಂಡಿದರು.
ಕಳೆದ ಎರೆಡು ದಿನಗಳ ಹಿಂದೆ ಕೆಲ ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆ ಕಂಡು ಬಂದಿದ್ದು, ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡ ವಿದ್ಯಾರ್ಥಿಗಳ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಐದು ವಿದ್ಯಾರ್ಥಿಗಳಿಗೆ ಸೋಂಕು ಇರುವುದು ಗೊತ್ತಾಗಿದೆ.
Date: 13-01-2022 : www.kknewsonline.in
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …

















