ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಖಂಡನೀಯ : ಸುಭಾಷ ಕಲ್ಲೂರ್
ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಖಂಡನೀಯ : ಸುಭಾಷ ಕಲ್ಲೂರ್
ಬೀದರ: ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸುವುದು ಖಂಡನೀಯವಾಗಿದೆ. ತಪ್ಪಿಸ್ಥರ ವಿರುದ್ಧ ಯಾವುದೇ ಮೂಲಾಜಿಲ್ಲದೆ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಮಾಜಿ ಶಾಸಕ ಸುಭಾಷ ಕಲ್ಲೂರ್ ಹೇಳಿದ್ದಾರೆ.
ಕೊರೊನಾ ಹತೋಟಿಗೆ ತರುವ ನಿಟ್ಟಿನಲ್ಲಿ ಇಲ್ಲಿನ ಅಧಿಕಾರಿಗಳು ಹಗಲು-ರಾತ್ರಿ ಕೆಲಸ ನಿರ್ವಹಿಸುತ್ತಿದ್ದಾರೆ. ಪಶು ಇಲಾಖೆಯ ಉಪ ನಿರ್ದೇಶಕರಾದ ಡಾ| ಗೋವಿಂದ್ ಹುಮನಾಬಾದ ಹಾಗೂ ಚಿಟಗುಪ್ಪ ತಾಲೂಕುಗಳ ನೋಡಲ್ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಜನರ ಜೀವ ರಕ್ಷಣೆಗಾಗಿ ಅಧಿಕಾರಿಗಳ ತಂಡ ಕೆಲಸ ಮಾಡುತ್ತಿದೆ ಎಂಬುವುದು ಸಾರ್ವಜನಿಕರು ತಿಳಿದುಕೊಂಡು ಅವರಿಗೆ ಗೋರವದಿಂದ ಕಾಣಬೇಕು. ಅಸಭ್ಯವರ್ತನೆ, ಹಲ್ಲೆ ಘಟನೆಗಳು ಸರಿ ಅಲ್ಲ. ಅಧಿಕಾರಿಗಳ ತಂಡಕ್ಕೆ ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕು. ಒಬ್ಬರಿಂದ ಇನ್ನೊಬ್ಬರಿಗೆ ಬರುವ ಕೊರೊನಾ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಅಧಿಕಾರಿಗಳ ಸಾತ್ ನೀಡಬೇಕು. ಅಲ್ಲದೆ, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸರ್ಕಾರದ ನಿಯಮಗಳು ಕಡ್ಡಾಯವಾಗಿ ಪಾಲಿಸಿದರೆ ಮಾತ್ರ ಜೀವ ರಕ್ಷಣೆ ಸಾಧ್ಯ ಎಂಬುವುದು ತಿಳಿದುಕೊಂಡು ಕೊರೊನಾ ವಾರಿಯರ್ಸ್ ಗಳಿಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
Date: 02-07-2020 www.kknewsonline.in
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















