ಗಾಂಜಾ ಸಾಗಾಟ, ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ಕಠಿಣ ಕ್ರಮ : ಬೀದರ ಎಸ್.ಪಿ
ಗಾಂಜಾ ಸಾಗಾಟ, ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ಕಠಿಣ ಕ್ರಮ : ಬೀದರ ಎಸ್.ಪಿ
ಬೀದರ: ಜಿಲ್ಲೆಯ ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟ, ಮಾರಾಟ ಹಾಗೂ ಸೇವನೆ ಮಾಡುವವರನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೀದರ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದ್ದು, ಗಾಂಜಾ ಬೆಳೆಸುವುದು, ಮಾರಾಟ ಮಾಡುವುದು ಹಾಗೂ ಗಾಂಜಾ ಸೇವನೆ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಅಕ್ರಮಗಳ ಬಗ್ಗೆ ಸಾರ್ವಜನಿಕರು ನಿರ್ಬೀತಿಯಿಂದ ಪೊಲೀಸರಿಗೆ ಮಾಹಿತಿ ನೀಡಬಹುದು ಎಂದು ತಿಳಿಸಿದ್ದಾರೆ.
![]()
https://play.google.com/store/apps/details?id=kknewsonline.in
ಹೆಚ್ಚಿನ ಸುದ್ದಿಗಳಿಗಾಗಿ ಓದಿ ಕಸ್ತೂರಿ ಕಿರಣ ಪತ್ರಿಕೆ : Date:15-09-2020 :
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















