Home ನಿಮ್ಮ ಜಿಲ್ಲೆ ಬೀದರ ಗ್ರಾಮ ಪಂಚಾಯಿತ ಅಧ್ಯಕ್ಷರು, ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿ ನಿಗದಿ

ಗ್ರಾಮ ಪಂಚಾಯಿತ ಅಧ್ಯಕ್ಷರು, ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿ ನಿಗದಿ

ಗ್ರಾಮ ಪಂಚಾಯಿತ ಅಧ್ಯಕ್ಷರು, ಉಪಾಧ್ಯಕ್ಷರ
ಪ್ರವರ್ಗವಾರು ಮೀಸಲಾತಿ ನಿಗದಿ

ಬೀದರ: ರಾಜ್ಯ ಚುನಾವಣಾ ಆಯೋಗವು ಬೀದರ ಜಿಲ್ಲೆಯಲ್ಲಿ ತಾಲೂಕುವಾರು ಗ್ರಾಮ ಪಂಚಾಯಿತ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಪ್ರವರ್ಗವಾರು ಮೀಸಲಾತಿಯನ್ನು ನಿಗದಿಪಡಿಸಿ ಅಧಿಸೂಚಿಸಿರುತ್ತದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದ್ದಾರೆ.
ಈ ಮೀಸಲಾತಿಯನ್ನು ಗ್ರಾಮ ಪಂಚಾಯಿತಿವಾರು ನಿಯಮಾನುಸಾರ ಮರು ಹಂಚಿಕೆ ಮಾಡಬೇಕಾಗಿರುತ್ತದೆ. ಈ ಪ್ರಕ್ರಿಯೆಗಾಗಿ ತಾಲೂಕುವಾರು ಜನವರಿ 18ರಿಂದ ಸಮಯ ನಿಗದಿಪಡಿಸಲಾಗಿದೆ.
ನಿಗದಿಪಡಿಸಿದ ಸ್ಥಳದಲ್ಲಿ ಆಯಾ ತಾಲೂಕಿನ ಎಲ್ಲ ಚುನಾಯಿತರಾದ ಗ್ರಾಮ ಪಂಚಾಯಿತಿ ಸದಸ್ಯರು ಚುನಾವಣಾಧಿಕಾರಿಗಳಿಂದ ನೀಡಲಾದ ಪ್ರಮಾಣ ಪತ್ರದೊಂದಿಗೆ ನಿಗದಿಪಡಿಸಿದ ಸಮಯಕ್ಕಿಂತಲೂ 1 ಗಂಟೆ ಮುಂಚಿತವಾಗಿ ಅವರವರ ಗ್ರಾಮ ಪಂಚಾಯಿತಿಗೆ ನಿಗದಿಪಡಿಸಲಾದ ಸ್ಥಾನದಲ್ಲಿ ಕೋವಿಡ ನಿಯಮಾನುಸಾರ ಆಸೀನರಾಗಲು ಸೂಚಿಸಿ ಉಪಸ್ಥಿತರೆಲ್ಲರಿಗೂ ಕಡ್ಡಾಯವಾಗಿ ಮಾಸ್ಕ ಧರಿಸಲು ತಿಳಿಸುವಂತೆ ಕ್ರಮ ವಹಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Date:17-01-2021: www.kknewsonline.in

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …