ಜಂಬಗಿ ಗ್ರಾಮ ಪಂಚಾಯತ ಅಧ್ಯಕ್ಷರ ಸದಸ್ಯತ್ವ ರದ್ದು..?
ಬೀದರ: ಅಕ್ರಮ ಆರೋಪ ಸಾಬೀತಾದ ಹಿನ್ನೆಲೆ ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ ಅಧ್ಯಕ್ಷರ ಸದಸ್ಯತ್ವ ರದ್ದು ಪಡಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ನಾರಾಯಣ ಡಿಜೆ ಆದೇಶ ಹೊರಡಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಜಂಬಗಿ ಗ್ರಾಮ ಪಂಚಾಯತ ಅಧ್ಯಕ್ಷ ವಿಜಯಕುಮಾರ ಮಸ್ಕಲೆ ವಿರುದ್ದ ಆಕ್ರಮ ಆರೋಪ ಹಿನ್ನೆಲೆಯಲ್ಲಿ ಅರೆನ್ಯಾಯಿಕ ಮಾದರಿಯಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ. 1993ರ ಪ್ರಕಾರ 43(ಎ) ಅಡಿ ಗ್ರಾಮ ಪಂಚಾಯತ ಸದಸ್ಯರುಗಳ 48(4) ಮತ್ತು 48(5) ಅನ್ವಯ ಗ್ರಾಮ ಪಂಚಾಯತ ಅಧ್ಯಕ್ಷ ವಿರುದ್ದ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶ ಪತ್ರದಲ್ಲಿ ವಿವರಿಸಲಾಗಿದೆ.
ಜಂಬಗಿ, ವಲ್ಲೆಪೂರ, ವಿಜಯನಗರ ತಾಂಡ, ಮಹಾರಾಜ್‌ವಾಡಿ ಮತ್ತು ಕಂದಗೋಳ ಗ್ರಾಮಗಳಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳನ್ನು ಬಿಟ್ಟು ಶೌಚಾಲಯ ನಿರ್ಮಾಣ ಮಾಡದೇ ಇರುವ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಪಾವತಿಮಾಡಿ ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗಿ, ಸರ್ಕಾರದ ಹಣ ದುರುಪಯೋಗ ಪಡಿಸಿಕೊಂಡು ಅವ್ಯವಹಾರ ಎಸಗಿರುವುದು ತನಿಖೆಯಲ್ಲಿ ಸಾಬಿತ್ತಾಗಿದೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.
ವಿಚಾರಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರು, ಜಂಬಗಿ ಗ್ರಾಮ ಪಂಚಾಯತ ಅಧ್ಯಕ್ಷ ಅವ್ಯವಹಾರಗಳ ಕುರಿತು ವಿಚಾರಣೆ ನಡೆಸಿದ್ದು, ಅಧ್ಯಕ್ಷರ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಲು ಹಾಗೂ ಸದರಿ ಸದ್ಯತ್ವವನ್ನು ರದ್ದು ಪಡಿಸುವಂತೆ ಸರ್ಕಾರಕ್ಕೆ ಶಿಫಾರಸ್ಸುಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಕ್ರಮ ತೆಗೆದುಕೊಂಡಿದೆ. ಅಲ್ಲದೆ, ಈ ಕುರಿತು ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಿ, ವಸೂಲಿ ಮಾಡುವಂತೆ ಕೂಡ ಸರ್ಕಾರ ಆದೇಶದಲ್ಲಿ ತಿಳಿಸಿದೆ. ಅದೇ ಗ್ರಾಮ ಪಂಚಾಯತ ಸದಸ್ಯ ಅಂಬಾದಸ ಕಾಡಗೆ ಅಕ್ರಮದ ಕುರಿತು ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಿ, ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ.
Date: 30-11-2019
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















