ಜವಾಬ್ದಾರಿ ಅರೆತ್ತುಕೊಂಡು ಪ್ರಾಮಾಣಿಕವಾಗಿ ಕೆಲಸ ನಿಭಾಯಿಸುವೆ ಸಂಸದ ಸಾಗರ್ ಖಂಡ್ರೆ
ಹಲಬರ್ಗಾ ಮಠದಲ್ಲಿ ಅಭಿನಂದನೆ
ಜವಾಬ್ದಾರಿ ಅರೆತ್ತುಕೊಂಡು ಪ್ರಾಮಾಣಿಕವಾಗಿ ಕೆಲಸ ನಿಭಾಯಿಸುವೆ ಸಂಸದ ಸಾಗರ್ ಖಂಡ್ರೆ
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಜನ ಚಿಕ್ಕ ವಯಸ್ಸಿನಲ್ಲೇ ನನಗೆ ಗುರುತರ ಜವಾಬ್ದಾರಿ ನೀಡಿದ್ದಾರೆ. ಅದನ್ನು ಪ್ರಾಮಾಣಿಕವಾಗಿ ನಿಭಾಯಿಸಲು ಸರ್ವ ಪ್ರಯತ್ನ ಮಾಡುವೆ ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು.
ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರ ವತಿಯಿಂದ ಸೋಮವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಗುರು ವಂದನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಎಲ್ಲರ ಮಾರ್ಗದರ್ಶನದೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವೆ. ಜನರ ಏನೇ ಸಮಸ್ಯೆಗಳಿದ್ದರೂ ಸ್ಪಂದಿಸುವೆ ಎಂದು ತಿಳಿಸಿದರು. ಗುರುವಿನ ಬಲವಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಹೀಗಾಗಿ ಎಲ್ಲರೂ ಗುರುವಿನ ಕೃಪೆಗೆ ಪಾತ್ರರಾಗಬೇಕು ಎಂದು ಹೇಳಿದರು. ಹಾವಗಿಲಿಂಗೇಶ್ವರ ಶಿವಾಚಾರ್ಯರು ಸಮಾಜೋಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಭಕ್ತರಿಗೆ ಸನ್ಮಾರ್ಗ ತೋರುತ್ತಿದ್ದಾರೆ ಎಂದರು. ಅಧಿಕಾರ ವಹಿಸಿಕೊಂಡು 12 ವರ್ಷ ಪೂರ್ಣಗೊಳಿಸಿದ ಪ್ರಯುಕ್ತ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯರಿಗೆ ಗುರು ವಂದನೆ ಸಲ್ಲಿಸಲಾಯಿತು. ಲಾಡಗೇರಿಯ ಗಂಗಾಧರ ಶಿವಾಚಾರ್ಯ ಸಾನಿಧ್ಯ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಿನಿಬಾಯಿ ಶಿವಪಾಲ್‍ಸಿಂಗ್ ಠಾಕೂರ್ ಅಧ್ಯಕ್ಷತೆ ವಹಿಸಿದ್ದರು.
ಸದಸ್ಯರಾದ ದತ್ತಾತ್ರಿ ಪಾಟೀಲ, ಮಂಜುನಾಥ ಪಾಟೀಲ, ಶಿವಕುಮಾರ ಪಾಟೀಲ ತೇಗಂಪುರ, ಘಾಳೆಪ್ಪ ನಾಗೂರೆ, ಗೋರಕನಾಥ ಶ್ರೀಮಾಳೆ, ಮಹೇಶ ಪಾಟೀಲ, ನವನಾಥ ಪಾಟೀಲ, ಮೋಹನ್ ಡಾಂಗೆ, ಮಹಾರುದ್ರ ದೊಡ್ಡಿ, ಮಾರುತಿ ಸೂರ್ಯವಂಶಿ, ಬ್ರಿಜ್‍ಪಾಲ್‍ಸಿಂಗ್(ಪಿಂಟು ಠಾಕೂರ್) ವೇದಿಕೆಯಲ್ಲಿದ್ದರು.
ಹೆಚ್ಚಿನ ಸುದ್ದಿಗಳಿಗಾಗಿ ಓದಿ : ಕಸ್ತೂರಿಕಿರಣ Date: 09-10-2024 :
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …

















