Home ನಿಮ್ಮ ಜಿಲ್ಲೆ ಬೀದರ ಜಿಲ್ಲಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರ ಸಂಚಾರ

ಜಿಲ್ಲಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರ ಸಂಚಾರ

ಜಿಲ್ಲಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರ ಸಂಚಾರ

ಸರ್ಕಾರದ ಮಾರ್ಗಸೂಚಿ ಪಾಲನೆಗೆ ನಿರ್ದೇಶನ

ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿನ ಕೋವಿಡ್-19 ಸ್ಥಿತಿಗತಿ ಪರಿಶೀಲಿಸಿದ ಸಚಿವರಾದ ಪ್ರಭು ಚವ್ಹಾಣ್

ಬೀದರ :  ಪಶು ಸಂಗೋಪನೆ, ಹಜ್ ಮತ್ತು ವಕ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಜೂನ್ 23ರಂದು ಕೋವಿಡ್-19ರ ಮುಂಜಾಗ್ರತಾ ಪರಿಶೀಲನೆಗಾಗಿ ಕಮಲನಗರ, ಭಾಲ್ಕಿ, ಬಸವಕಲ್ಯಾಣ, ಹುಮಾನಾಬಾದ್, ಚಿಟಗುಪ್ಪಾ ಸಾರ್ವಜನಿಕ ಆಸ್ಪತ್ರೆಗಳಿಗೆ ಭೇಟಿ ನೀಡಿದರು.
ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗ್ಯಾನೇಂದ್ರಕುಮಾರ ಗಂಗವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿ.ಎಲ್.ನಾಗೇಶ, ಸಹಾಯಕ ಆಯುಕ್ತರಾದ ಅಕ್ಷಯ್ ಶ್ರೀಧರ್, ಭಂವರಸಿಂಗ್ ಮೀನಾ, ಡಿಎಚ್ಓ ಡಾ.ವಿ.ಜಿ.ರೆಡ್ಡಿ ಅವರೊಂದಿಗೆ ಜಿಲ್ಲಾದ್ಯಂತ ಸಂಚರಿಸಿದ ಸಚಿವರು, ಆಯಾ ತಾಲೂಕು ಆಸ್ಪತ್ರೆಗಳಲ್ಲಿನ ಮೂಲಭೂತ ಆರೋಗ್ಯ ಸೌಕರ್ಯಗಳ ಬಗ್ಗೆ ಸ್ಥಳದಲ್ಲಿದ್ದ ತಾಲೂಕು ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ರೋಗಿಗಳ ಆರೋಗ್ಯ ವಿಚಾರಿಸಿದರು.
ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್, ಚಿಟಗುಪ್ಪಾ, ಔರಾದ್, ಕಮಲನಗರ, ಬೀದರ ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಅನುಸಾರ ಕೋವಿಡ್-19ರ ಮುಂಜಾಗ್ರತಾ ಕ್ರಮಗಳು ತಪ್ಪದೇ ಪಾಲನೆಯಾಗಬೇಕು. ಮಾಸ್ಕ ಧರಿಸಿದವರಿಗೆ ಮಾತ್ರ ಆಸ್ಪತ್ರೆಗೆ ಪ್ರವೇಶ ಕಲ್ಪಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಮುನ್ನೆಚ್ಚರಿಕೆ ಕ್ರಮ ತೀವ್ರಗೊಳಿಸಿ: ಚಿಟಗುಪ್ಪಾ ಹೊರವಲಯದಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ಮಾಡಿದ ಸಚಿವರು, ಚಿಟಗುಪ್ಪಾದಲ್ಲಿ ಕೋರೋನಾ ಬಾಧಿತರ ಸಂಖ್ಯೆ ಹೆಚ್ಚಾಗಿದ್ದು, ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಬೇಕು ಎಂದು ತಿಳಿಸಿದರು.
*ಸಾರ್ವಜನಿಕರಲ್ಲಿ ಸಚಿವರ ಮನವಿ: ಮುನ್ನೆಚ್ಚರಿಕೆ ದೃಷ್ಟಿಯಿಂದಾಗಿ ಪ್ರತಿಯೊಬ್ಬರು
ಆರೋಗ್ಯ ಸೇತು ಆ್ಯಪ್ ಹಾಕಿಕೊಳ್ಳಬೇಕು. ಕಡ್ಡಾಯ ಮಾಸ್ಕ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಚಿವರು ಇದೆ ವೇಳೆ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಸರ್ಕಾರದಿಂದ ಸಹಾಯ: ಕೊರೋನಾ ಮಹಾಮಾರಿ ನಿಗ್ರಹಕ್ಕೆ ವೈದ್ಯರು ಸೇರಿದಂತೆ ಪ್ರತಿಯೊಬ್ಬರು ಸಹಕರಿಸಬೇಕು. ಸೋಂಕಿತರ ಚಿಕಿತ್ಸೆಗೆ ಮತ್ತು ಮೂಲ ಸೌಕರ್ಯದೊಂದಿಗೆ ಆಸ್ಪತ್ರೆಗಳನ್ನು ಸುಸಜ್ಜಿತವಾಗಿಡಲು ಸಹಾಯ ಬೇಕಾದಲ್ಲಿ ಸರಕಾರದ ಗಮನಕ್ಕೆ ತಂದು ಕ್ರಮಕೈಗೊಳ್ಳಲಾಗುವುದು ಎಂದು ಇದೆ ವೇಳೆ ಸಚಿವರು ಸುದ್ದಿಗಾರರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ರಾಜಶೇಖರ ಪಾಟೀಲ್, ಬಿ.ನಾರಾಯಣರಾವ್, ತಹಸಿಲ್ದಾರರು ಹಾಗೂ ತಾಪಂ ಕಾರ್ಯನಿರ್ವಾಹಣಾಧಿಕಾರಿಗಳು, ತಾಲೂಕಿನ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

 

Date: 23-06-2020  www.kknewsonline.in

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…