ಜಿಲ್ಲೆಯ ಎಲ್ಲ ಸ್ಕ್ಯಾಯನಿಂಗ್ ಕೇಂದ್ರಗಳಲ್ಲಿ ಸಿಸಿಟಿವಿ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸೂಚನೆ
ಬೀದರ: ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ೧೯೯೪ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಎಲ್ಲ ಸ್ಕ್ಯಾಯನಿಂಗ್ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ಇನ್ನಷ್ಟು ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ|ಹೆಚ್.ಆರ್.ಮಹಾದೇವ ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಇಲಾಖೆಯಿಂದ ಕಾಯಕಲ್ಪ ಹಾಗೂ ಪಿ.ಸಿ.ಪಿ.ಎನ್.ಡಿ.ಟಿ ಕುರಿತು ಡಿ.೧೭ರಂದು ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಹೆಣ್ಣು ಭ್ರೂಣ ಹತ್ಯೆ ತಡೆಯಲು ಅಗತ್ಯವಿದ್ದಲ್ಲಿ ಪೋಲೀಸ್ ಇಲಾಖೆಯ ಸಹಾಯ ಪಡೆಯಬೇಕು. ಭ್ರ್ರೂಣ ಲಿಂಗಪತ್ತೆಗೆ ಒತ್ತಾಯ ಮಾಡುವಂತಹ ಪ್ರಕರಣಗಳು ಕಂಡುಬAದಲ್ಲಿ ಅಂಥವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಗರ್ಭನಿರೋಧಕ ಮಾತ್ರೆಗಳ ದುರ್ಬಳಕೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಕುರಿತಂತೆ ಮೆಡಿಕಲ್ ಅಂಗಡಿಯ ಮಾಲೀಕರು ಹಾಗೂ ಏಜೆನ್ಸಿ ಮಾಲೀಕರ ಸಭೆಯನ್ನು ಕರೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ ರೆಡ್ಡಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕುಸಿಯುತ್ತಿರುವುದು ಚಿಂತಾಜನಕವಾಗಿದ್ದು, ಲಿಂಗ ಸಮತೋಲನ ಕಾಪಾಡಲು ವೈದ್ಯರು ಹಾಗೂ ಸಾರ್ವಜನಿಕರು ಪಿ.ಸಿ.ಪಿ.ಎನ್.ಡಿ.ಟಿ ಕಾನೂನಿನ ಸಮರ್ಪಕ ಅನುಷ್ಠಾನಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ಅಧಿಕಾರಿ ಡಾ.ಇಂದುಮತಿ ಪಾಟೀಲ ಅವರು ಮಾತನಾಡಿ, ಇಲಾಖೆಯಿಂದ ಜಿಲ್ಲೆಯಲ್ಲಿ ನಡೆಯುವ ಪ್ರತಿಯೊಂದು ಗರ್ಭಪಾತದ ಬಗ್ಗೆ ವರದಿ ತಯಾರಿಸಲಾಗುತ್ತಿದೆ. ಇದಕ್ಕೆ ಕುಟುಂಬಸ್ಥರು ಸಹಕರಿಸಬೇಕಿದೆ ಎಂದರು.
ಬಿಓಜಿಎಸ್ ಅಧ್ಯಕ್ಷರಾದ ಡಾ.ವಿಜಯಶ್ರೀ ಬಶೆಟ್ಟಿ ಅವರು ಮಾತನಾಡಿ, ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಆರೋಗ್ಯ ಇಲಾಖೆಯಿಂದ ಹೆಣ್ಣು ಮಕ್ಕಳಿರುವ ಗರ್ಭಿಣಿಯರ ಮೇಲೆ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.
ಬ್ರಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಉಮಾ ದೇಶಮುಖ ಅವರು ಮಾತನಾಡಿ, ಹೆಣ್ಣು ಮಕ್ಕಳು ಬೇಡ ಎಂಬ ಕಾರಣಕ್ಕಾಗಿ ಪ್ರಸವ ಪೂರ್ವದಲ್ಲೇ ಮಕ್ಕಳನ್ನು ಹತ್ಯೆ ಮಾಡುವುದು ಮಹಾ ಅಪರಾಧ. ಕಾಯ್ದೆ ಬಗ್ಗೆ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಪಿ.ಸಿ.ಪಿ.ಎನ್.ಡಿ.ಟಿ ಕಾನೂನಿನ ಬಗ್ಗೆ ಅರಿವು ಮೂಡಿಸಲಾಯಿತು. ಹಾಗೂ ಕುಂದುತ್ತಿರುವ ಹೆಣ್ಣು ಗಂಡಿನ ಅನುಪಾತದ ಬಗ್ಗೆ ಚರ್ಚಿಸಲಾಯಿತು.
ಕಾರ್ಯಾಗಾರದಲ್ಲಿ ವೈದ್ಯಾಧಿಕಾರಿಗಳಾದ ಡಾ.ಕೃಷ್ಣಾ ರೆಡ್ಡಿ, ಡಾ.ರಾಜಶೇಖರ್ ಪಾಟೀಲ, ಡಾ.ಅನೀಲ ಚಿಂತಾಮಣಿ, ಡಾ.ರವೀಂದ್ರÀ ಸಿರ್ಸೆ, ಡಾ.ಶಿವಶಂಕರ, ಡಾ.ದೀಪಾ ಖಂಡ್ರೆ, ಡಾ.ಶರಣಯ್ಯ ಸ್ವಾಮಿ, ಖಾಸಗಿ ಸ್ಕಾö್ಯನಿಂಗ್ ಕೇಂದ್ರಗಳ ಮಾಲೀಕರು ಹಾಗೂ ಸರ್ಕಾರಿ ವೈದ್ಯರು ಉಪಸ್ಥಿತರಿದ್ದರು.
Date:18-12-2019 Time:6:15Pm
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















