ಜುಲೈ ತಿಂಗಳಿಂದ ರಾಗಿ, ಜೋಳ ವಿತರಣೆ – ಆಹಾರ ಸಚಿವ
ಜುಲೈ ತಿಂಗಳಿಂದ ರಾಗಿ, ಜೋಳ ವಿತರಣೆ – ಆಹಾರ ಸಚಿವ
ಭ್ರಷ್ಠಾಚಾರಕ್ಕೆ ಆಸ್ಪದ ಇಲ್ಲ- ಆಹಾರ ಇಲಾಖೆ ಸುಧಾರಣೆಗೆ ಕ್ರಮ
ಬೀದರಃ ಜುಲೈ ತಿಂಗಳಿಂದ ರಾಜ್ಯದಲ್ಲಿ ರಾಗಿ ಬಳಕೆ ಮಾಡುವ ಪ್ರದೇಶಗಳಲ್ಲಿ ರಾಗಿ ಹಾಗೂ ಜೋಳ ಬಳಸುವ ಪ್ರದೇಶಗಳಲ್ಲಿ ಜೋಳ ವಿತರಣೆಗೆ ತೀರ್ಮಾನಿಸಲಾಗಿದ್ದು, ಪಡಿತರ ವ್ಯವಸ್ಥೆ ಮೂಲಕ ಜುಲೈ ತಿಂಗಳಿನಿಂದ ಜಾರಿಗೆ ಬರಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಹುಮನಾಬಾದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ರಾತ್ರಿ ಭೇಟಿನೀಡಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಈಗಾಗಲೇ ಟೆಂಡರ್ ಕರೆದಿದ್ದು, ಖರೀದಿ ಪ್ರಕ್ರಿಯೆಗಳು ನಡೆದಿದೆ. ಕೊರೊನಾ ಹಾವಳಿಯ ಮಧ್ಯೆದಲ್ಲಿ ಜೀವನ ಮಾಡುತ್ತಿರುವ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ಈ ತಿರ್ಮಾನ ತೆಗೆದುಕೊಳ್ಳಲಾಗಿದೆ. ಕುಟುಂಬದ ಸದಸ್ಯರ ಅನ್ವಯ ಧಾನ್ಯ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಪಡಿತರ ವಿತರಣೆ ವಿಳಂಬಃ ಈ ಬಾರಿ ಪಡಿತರ ವಿತರಣೆ ಬೀದರ್ ಜಿಲ್ಲೆಯಲ್ಲಿ ಎರಡು ದಿನ ವಿಳಂಬವಾಗುವ ಸಾಧ್ಯತೆ ಇದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಕೆ.ಗೋಪಾಲಯ್ಯ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು. ಬೀದರ್ ಜಿಲ್ಲೆಯ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿನೀಡಿದ್ದು, ವಿತರಣೆಯಾದ ಕಡಲೆ ಬೇಳೆ ಮೇಲ್ನೊಟಕ್ಕೆ ಕಳಪೆ ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಕಾಳುಗಳು ಬೆಂಗಳೂರಿನ ಲ್ಯಾಬ್ ಗೆ ಕಳುಹಿಸಿ ಪರೀಕ್ಷೆ ನಡೆಸಲಾಗುವುದು ಈ ಹಿನ್ನೆಲೆಯಲ್ಲಿ ಪಡಿತರ ವಿತರಣೆ ವಿಳಂಬ ಆಗಬಹುದು ಎಂದು ತಿಳಿಸಿದ್ದಾರೆ.
ಯಾರ ಮೇಲೆ ಕ್ರಮ?: ಕಳೆದ ಕೆಲ ದಿನಗಳ ಹಿಂದೆ ರಾಜ್ಯದ ಮಂಡ್ಯ, ಹಾಸನ ಸೇರಿದಂತೆ ಇತರೆ ಕಡೆಗಳಲ್ಲಿ ಕಳಪೆ ಬೇಳೆಕಾಳು ವಿತರಣೆ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗಿದ್ದು, ಯಾರ ವಿರುದ್ಧ ಕ್ರಮ ಕೈಗೊಂಡಿದ್ದಿರಿ ಎಂದು ಪತ್ರಕರ್ತರ ಪ್ರಶ್ನೆಗೆ ನೇರವಾಗ ಉತ್ತರಿಸಿದ ಸಚಿವರು, ಟೆಂಡರ್ ನಿಯಮದಂತೆ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ರಾಯಚೂರಿನಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ ಸಚಿವರು, ಕಳಪೆ ಅಂತ ವರದಿ ಬಂದರೆ ಬೇಳೆ ಪರೀಕ್ಷೆ ನಡೆಸುವ ಸಂಸ್ಥೆ ವಿರುದ್ಧ ಕೂಡ ಕಾನೂನು ಕ್ರಮ ಕೈಗೊಳ್ಳಲಾಗುವುದು. ಟೆಂಡರ್ ನಿಯಮದಂತೆ ಟೆಂಡರ್ ಪಡೆದಿರುವ ವ್ಯಕ್ತಿ ನಿಗದಿತ ದಿನಗಳಲ್ಲಿ ಬದಲಾವಣೆ ಮಾಡಬೇಕು. ಮಾಡದಿದ್ದರೆ ಅವರ ವಿರುದ್ಧ ಕೂಡ ಕ್ರಮ ವಹಿಸುತ್ತೇವೆ ಎಂದು ತಿಳಿಸಿದರು.
ಪಡಿತರ ಅಕ್ಕಿ ಮಾರಿದರೆ ಚೀಟಿ ರದ್ದು:- ಬಡವರಿಗೆ ಅನ್ನ ನೀಡುವ ನಿಟ್ಟಿನಲ್ಲಿ ಸರ್ಕಾರ ಪಡಿತರ ವ್ಯವಸ್ಥೆ ಮೂಲಕ ಅಕ್ಕಿ ವಿತರಣೆ ಮಾಡುತ್ತಿದ್ದು, ಸರ್ಕಾರಿ ಅಕ್ಕಿಯನ್ನು ಪಟಿತರ ಕುಟುಂಬಗಳು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಕೊರೊನಾ ಸೋಂಕಿನ ಹಾವಳಿ ಕಡಿಮೆಯಾದ ನಂತರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಯಾರು ಅಕ್ಕಿ ಮಾರಾಟ ಮಾಡುತ್ತಾರೆ ಅಂತವರ ಪಡಿತರ ಚೀಟಿ ರದ್ದುಮಾಡುವ ನಿಟ್ಟಿನಲ್ಲಿ ಚಿಂತನೆ ಇದೆ ಎಂದು ಸಚಿವರು ತಿಳಿಸಿದರು.
ಭ್ರಷ್ಟಾಚಾರಕ್ಕೆ ಆಸ್ಪದ ಇಲ್ಲ: ಪಡಿತರ ಹಾಗೂ ಶಾಲೆಗಳ ಬಿಸಿ ಊಟಕ್ಕೆ ಪೂರೈಕ್ಕೆ ಮಾಡುವ ಧಾನ್ಯಗಳ ಕಳಪೆಗೆ ಆಹಾರ ಇಲಾಖೆಯ ಪ್ರಮುಖ ಅಧಿಕಾರಿಗಳೇ ಶಾಮಿಲಾಗಿದ್ದಾರೆ ಎಂಬ ಆರೋಪ ಇದೆ. ತಮ್ಮ ಇಲಾಖೆಯಲ್ಲಿನ ಭಷ್ಟಾಚಾರ ಹೇಗೆ ತಡೆಯುತ್ತಿರಿ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭ್ರಷ್ಟಾಚಾರಕ್ಕೆ ಯಾವುದೇ ಆಸ್ಪದ ನೀಡುವುದಿಲ್ಲ. ಯಾರು ಅಂತಹ ಕೆಲಸದಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದರೆ ಅಥವಾ ತಿಳಿದುಬಂದರೆ ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಆಹಾರ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿನೀಡಿ ಖುದ್ದು ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಸಚಿವರು ಉತ್ತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸೋಮನಾಥ ಪಾಟೀಲ, ಪುರಸಭೆ ಸದದ್ಯ ರಮೇಶ ಕಲ್ಲೂರ್, ವಿಜಯಕುಮಾರ ದುರ್ಗದ, ಕರಬಸಪ್ಪ ವಕೀಲರು, ಸಂಜುರೆಡ್ಡಿ, ರವಿ ಹೊಸಳ್ಳಿ ಸೇರಿದಂತೆ ಇತರರು ಇದ್ದರು.
Date:10-06-2020 Time:10:05PM
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















