ಜೂ.15 ರಂದು ಸಮಾಜ ಕಲ್ಯಾಣ ಸಚಿವ* *ಡಾ.ಹೆಚ್.ಸಿ.ಮಹಾದೇವಪ್ಪ ಅವರ ಬೀದರ ಜಿಲ್ಲಾ ಪ್ರವಾಸ
ಬೀದರ, ಜೂನ್.12: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅಂದು ಅವರು ಮಧ್ಯಾಹ್ನ 1.30 ಗಂಟೆಗೆ ಹುಮನಾಬಾದ ತಾಲ್ಲೂಕಿನ ದುಬಲಗುಂಡಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಬಸವಕಲ್ಯಾಣ ತಾಲ್ಲೂಕು ಹಿರೇನಾಗವ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ಬೀದರ ತಾಲ್ಲೂಕಿನ ಸಂಶಿನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…