ಡಿ.14ರಂದು ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್
ಬೀದರ: ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಡಿಸೆಂಬರ್ 14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಲೋಕ ಅದಾಲತ್ ನಡೆಸಲಾಗುತ್ತಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮನಗೂಳಿ ಪ್ರೇಮಾವತಿ ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ನ.30ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕ್ ಅದಾಲತ್‌ನಲ್ಲಿ ಪ್ರಕರಣದ ಉಭಯ ಪಕ್ಷಗಾರರಲ್ಲಿ ರಾಜಿ ಸಂಧಾನ ಏರ್ಪಡಿಸುವ ಮೂಲಕ ಪ್ರಕರಣವನ್ನು ಇತ್ಯರ್ಥಗೊಳಿಸಲಾಗುತ್ತದೆ. ವ್ಯಾಜ್ಯವನ್ನು ಅತ್ಯಂತ ಕಡಿಮೆ ಖರ್ಚಿನಲ್ಲಿ, ಶೀಘ್ರ ಮತ್ತು ಅಂತಿಮವಾಗಿ ಇತ್ಯರ್ಥಪಡಿಸುವುದು ರಾಷ್ಟ್ರೀಯ ಲೋಕ ಅದಾಲತ್‌ನ ವೈಶಿಷ್ಠö್ಯತೆಯಾಗಿದೆ. ಕಕ್ಷಿಗಾರರು, ವಕೀಲರು, ಸಾರ್ವಜನಿಕರು, ಅಧಿಕಾರಿಗಳು, ಬ್ಯಾಂಕ್ ಅಧಿಕಾರಿ ಮತ್ತು ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಷ್ಟ್ರೀಯ ಲೋಕ ಅದಾಲತ್‌ನ ಲಾಭ ಪಡೆಯಬೇಕು ಎಂದು ಅವರು ಮನವಿ ಮಾಡಿದರು.
ಲೋಕ ಅದಾಲತ್‌ನಲ್ಲಿ ಯಾವುದೇ ಕೋರ್ಟ್ ಶುಲ್ಕ ಕೊಡಬೇಕಾಗಿಲ್ಲ. ಪಕ್ಷಗಾರರು ನೇರವಾಗಿ ಭಾಗವಹಿಸಲು ಅವಕಾಶವಿರುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ತೃಪ್ತಿಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಸಿವಿಲ್ ಪ್ರಕರಣ ಇತ್ಯರ್ಥಗೊಂಡರೆ ಅವಾರ್ಡ್ ಮಾಡಲಾಗುವುದು. ಅದು ಸಾಮಾನ್ಯ ಡಿಕ್ರಿಯಷ್ಟೆ ಮಹತ್ವ ಪಡೆದುಕೊಂಡಿರುತ್ತದೆ. ಇಲ್ಲಿ ಪ್ರಕರಣ ರಾಜಿ ಮಾಡಿಕೊಂಡಲ್ಲಿ ಶೇ.75ರಷ್ಟು ನ್ಯಾಯಾಲಯದ ಶುಲ್ಕವನ್ನು ವಾಪಸ್ಸು ನೀಡಲಾಗುತ್ತದೆ. ಲೋಕ ಅದಾಲತ್ ಅವಾರ್ಡ್ ವಿರುದ್ಧ ಮೇಲ್ಮನವಿಗೆ ಅವಕಾಶವಿರುವುದಿಲ್ಲ ಎಂದು ವಿವರಿಸಿದರು.
ಕಳೆದ ಸೆಪ್ಟೆಂಬರ್‌ನಲ್ಲಿ ನಡೆದ ಲೋಕ ಅದಾಲತ್‌ನಲ್ಲಿ 4,819 ಪ್ರಕರಣಗಳನ್ನು ಗುರುತಿಸಲಾಗಿತ್ತು, ಅವುಗಳ ಪೈಕಿ 1,625 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ, 6,63,16,904 ರೂ.ಗಳ ರಾಜಿಮಾಡಲಾಗಿದೆ. ಡಿ.14ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 1,819 ಪ್ರಕರಣಗಳನ್ನು ಗುರುತಿಸಲಾಗಿದೆ. ಇನ್ನು ಸಮಯಾವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ಗುರುತಿಸಲಾಗುವುದು ಎಂದರು.
ಎAವಿಸಿ ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸುವ ಪ್ರೀ ಕಾನ್ಸಿಲಿಯೇಷನ್ ಸಿಟ್ಟಿಂಗ್‌ನಲ್ಲಿ ಅರ್ಜಿದಾರರು ಹಾಗೂ ಅವರ ಪರ ವಕೀಲರು ಸೂಕ್ತ ದಾಖಲಾತಿಗಳೊಂದಿಗೆ ಹಾಜರಾಗಿ ತಮ್ಮ ಪ್ರಕರಣ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು. ಎಲ್‌ಎಸಿ ಎಕ್ಷಿಕ್ಯೂಷನ್ ಪ್ರಕರಣಗಳಿಗೆ ಸಂಬAಧಿಸಿದAತೆ ಪ್ರೀ ಕಾನ್ಸಿಲಿಯೇಷನ್ ಸಿಟ್ಟಿಂಗ್ ಹಮ್ಮಿಕೊಳ್ಳಲಾಗಿದ್ದು, ಅದರಲ್ಲಿಯೂ ಸಹ ಡಿಕ್ರಿದಾರರು ಭಾಗವಹಿಸಿ ತಮ್ಮ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು. ಅದೇ ರೀತಿ ಎಂಎAಆರ್‌ಡಿ ಪ್ರಕರಣಗಳಲ್ಲಿಯೂ ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ರೈತರ ಸಾಲ ಮನ್ನಾ ಆಗಿದ ಪ್ರಕರಣಗಳಲ್ಲಿ ರೈತರು ತಮ್ಮ ಸಾಲ ಮನ್ನಾ ಆಗಿದ್ದ ಬಗ್ಗೆ ಮತ್ತು ಉಳಿದ ಬಾಕಿ ಮೊತ್ತ ಪಾವತಿಸುವಲ್ಲಿ ರಿಯಾಯಿತಿ ಪಡೆದುಕೊಳ್ಳುವ ಪ್ರಕರಣಗಳಲ್ಲಿಯೂ ಸಹ ರೈತರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು. ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಕೋರಿದರು.
ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಸಂಧಾನಕ್ಕೆ ತೆಗೆದುಕೊಳ್ಳುವ ಪ್ರಕರಣಗಳ ವಿವರ ಹೀಗಿದೆ.
ವ್ಯಾಜ್ಯಪೂರ್ವ ಪ್ರಕರಣಗಳು: ಚೆಕ್ ಬೌನ್ಸ್ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳ ಪ್ರಕರಣಗಳು(ರಾಜಿ ಮಾಡಿಕೊಳ್ಳಲು ಬರಲಾರದ ಪ್ರಕಣಗಳನ್ನು ಹೊರತುಪಡಿಸಿ), ಇತರೆ ಪ್ರಕರಣಗಳು(ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು, ವೈವಾಹಿಕ ಮತ್ತು ಇತರ ಸಿವಿಲ್ ವ್ಯಾಜ್ಯಗಳು).
ಈಗಾಗಲೇ ನ್ಯಾಯಾಲಯಗಳಲ್ಲಿ ವಿಚಾರಣೆಗಾಗಿ ಬಾಕಿ ಇರುವ ಪ್ರಕರಣಗಳು: ಕ್ರಿಮಿನಲ್ ರಾಜಿಯಾಗಬಹುದಾದ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದ ಪ್ರಕರಣಗಳು, ಮೊಟಾರ್ ವಾಹನ ಅಪಘಾತಗಳಲ್ಲಿ ಗಾಯಗೊಂಡವರು ಅಥವಾ ಮೃತಪಟ್ಟವರ ವಾರಸುದಾರರು ಅಥವಾ ಅವಲಂಬಿತರು ಪರಿಹಾರಧನ ಕೋರಿ ಸಲ್ಲಿಸಲಾದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳ ಪ್ರಕರಣಗಳು(ರಾಜಿ ಮಾಡಿಕೊಳ್ಳಲು ಬರಲಾರದ ಪ್ರಕರಣಗಳನ್ನು ಹೊರತುಪಡಿಸಿ), ವೈವಾಹಿಕ ವಿವಾದಗಳು ಮತ್ತು ಜೀವನಾಂಶದ ಪ್ರಕರಣಗಳು, ಭೂ ಸ್ವಾಧಿನ ಸಂಬAಧ ಸರ್ಕಾರದಿಂದ ಪರಿಹಾರಧನ ಕೋರಿ ಸಲ್ಲಿಸಲಾದ ಪ್ರಕರಣಗಳು, ವೇತನ, ಭತ್ಯೆ ಮತ್ತು ನಿವೃತ್ತಿ ಸೌಲಭ್ಯಗಳಿಗೆ ಸಂಬAಧಿಸಿದ ಸೇವೆಗಳು, ಕಂದಾಯ ಪ್ರಕರಣಗಳು(ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಾಕಿ ಇರುವ ಪ್ರಕರಣಗಳು), ಇತರೆ ಸಿವಿಲ್ ಪ್ರಕರಣಗಳು (ಬಾಡಿಗೆ, ಇಜಮೆಂಟರಿ ರೈಟ್ಸ್, ನಿರ್ಭಂದsಕಾಜ್ಞೆ ದಾವೆಗಳು, ಸ್ಪೆಸಿಪಿಕ್ ಪರ್ಫಾಮೆನ್ಸ್ ದಾವೆಗಳು, ಆಸ್ತಿ ವಿಭಾಗದ ದಾವೆಗಳು, ಮಕ್ಕಳ ಕಸ್ಟಡಿ ಪ್ರಕರಣಗಳು), ಇತರೆ ಕ್ರಿಮಿನಲ್ ಪ್ರಕರಣಗಳು(ಡಿ.ವಿ ಆಕ್ಟ್ ಪ್ರಕರಣಗಳು, ಜೀವನಾಂಶ ಪ್ರಕರಣಗಳು) ಈ ಪ್ರಕರಣಗಳನ್ನು ರಾಜಿ ಸಂದಾನಕ್ಕೆ ತೆಗೆದುಕೊಳ್ಳಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿ.ಜೆ.ಎಂ ಝರೀನಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ.ಟಿ.ಪಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜಗದೀಶ ಜಗತಾಪ, ಉಪಾಧ್ಯಕ್ಷ ಪ್ರಕಾಶ.ವಿ.ಎಂ, ಪ್ರಧಾನ ಕಾರ್ಯದರ್ಶಿ ಧನರಾಜ ಬೀರಾದರ, ಜಂಟಿ ಕಾರ್ಯದರ್ಶಿ ಅಂಬಾದಾಸ ವಾಗರಾಜ ಉಪಸ್ಥಿತರಿದ್ದರು.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















