ತಪ್ಪದೇ ಕಂದಾಯ ಅದಾಲತ್ ನಡೆಸಿ : ಡಿಸಿ
ವಿವಿಧ ಮಾಶಾಸನ ಸೂಕ್ತ ಸಮಯಕ್ಕೆ ನೀಡಿ
ಬೀದರ: ಎಲ್ಲ ತಹಸೀಲ್ದಾರರು ಪ್ರತಿ ವಾರ ತಪ್ಪದೇ ಕಂದಾಯ ಅದಾಲತ್ ನಡೆಸಿ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಹೆಚ್.ಆರ್.ಮಹಾದೇವ್ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕಂದಾಯ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಂದಾಯ ಇಲಾಖೆಯಲ್ಲಿ ಸಾಕಷ್ಟು ಅರ್ಜಿಗಳು ವಿಲೇವಾರಿಯಾಗದೇ ಬಾಕಿ ಉಳಿದಿವೆ. ವಾರದಲ್ಲಿ ಒಂದು ದಿನವನ್ನು ನಿಗದಿಪಡಿಸಿಕೊಂಡು ಕಂದಾಯ ಅದಾಲತ್ ನಡೆಸಬೇಕು. ಪಿಂಚಣಿಗೆ ಸಂಬAಧಿಸಿದ ಅರ್ಜಿಗಳನ್ನು ಕೂಡ ವಿಲೇವಾರಿ ಮಾಡಬೇಕು ಎಂದು ತಹಸೀಲ್ದಾರರಿಗೆ ಸೂಚಿಸಿದರು.
ಸಂಧ್ಯಾ ಸುರಕ್ಷಾ ಯೋಜನೆಯಡಿ ಹಣ ಬಿಡುಗಡೆಯಾಗುತ್ತಿಲ್ಲ ಎಂದು ವಯೋವೃದ್ಧರು ದೂರು ಸಲ್ಲಿಸುತ್ತಿದ್ದಾರೆ ಯಾಕೆ ಹೀಗಾಗುತ್ತಿದೆ ಎಂದು ಪ್ರಶ್ನಿಸಿದಾಗ, ಸಾಮಾಜಿಕ ಭ್ರದ್ರತೆ ಯೋಜನೆಯ ಅಧಿಕಾರಿ ಮಾತನಾಡಿ, ಕೆ-2 ಅನ್ವಯ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಆಧಾರ್ ಮತ್ತು ಬ್ಯಾಂಕ್ ಖಾತೆ ಸಂಖ್ಯೆಯನ್ನು ನೀಡದೇ ಇರುವ ಕಾರಣದಿಂದಾಗಿ ಕೆಲವರಿಗೆ ಹಣ ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು.
ಪ್ರತಿ ತಿಂಗಳು ಹಣ ಪಾವತಿಯಾಗದೇ ಇರುವ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿ ಸಂಬAಧಿಸಿದ ಗ್ರಾಮ ಲೆಕ್ಕಿಗರಿಂದ ದಾಖಲಾತಿಗಳನ್ನು ಸಂಗ್ರಹಿಸಬೇಕು. ತಾಂತ್ರಿಕ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿಕೊಂಡು ಫಲಾನುಭವಿಗಳಿಗೆ ಹಣ ಪಾವತಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.
ವಿಕಲಚೇತನರ ಮಾಶಾಸನ ತಡೆಹಿಡಿದಿರುವ ಬಗ್ಗೆ ದೂರುಗಳು ಬಂದಿವೆ. ಅರ್ಜಿ ಸಲ್ಲಿಸುವವರ ಪೈಕಿ ದಾಖಲಾತಿಗಳನ್ನು ಪರಿಶೀಲಿಸಿ ಮುಂದಿನ ಕ್ರಮ ವಹಿಸಬೇಕು. ಅರ್ಹರು ಸೌಲಭ್ಯದಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮನಸ್ವಿನಿ ಯೋಜನೆಯಡಿ ಜಿಲ್ಲೆಯಲ್ಲಿ 10 ಅರ್ಜಿಗಳನ್ನು ತಿರಸ್ಕರಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಈ ಯೋಜನೆಯಡಿ ಸಾಮಾನ್ಯವಾಗಿ ಬಡ ಮಹಿಳೆಯರೇ ಅರ್ಜಿ ಸಲ್ಲಿಸುತ್ತಾರೆ. ಕೆಲವರಿಗೆ ಸೂಕ್ತ ತಿಳುವಳಿಕೆ ಇಲ್ಲದ ಕಾರಣ ದಾಖಲಾತಿಗಳನ್ನು ಸಲ್ಲಿಸಲು ಸಾಧ್ಯವಾಗುವುದಿಲ್ಲ. ಅಂಥವರಿಗೆ ದಾಖಲಾತಿಗಳನ್ನು ಒದಗಿಸಿ ಯೋಜನೆಯ ಸೌಲಭ್ಯ ಕಲ್ಪಿಸಲು ಕಾಳಜಿ ವಹಿಸಬೇಕು ಎಂದು ತಹಸೀಲ್ದಾರರಿಗೆ ತಿಳಿಸಿದರು.
ಮೈತ್ರಿ ಯೋಜನೆಯಡಿ ಸೌಲಭ್ಯ ಪಡೆಯುವವರ ಸಂಖ್ಯೆ ಕಡಿಮೆ ಪ್ರಮಾಣದಲ್ಲಿದೆ. ಜಿಲ್ಲೆಯಲ್ಲಿ ಸುಮಾರು 1,000 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಅವರೊಂದಿಗೆ ಒಂದು ಸಭೆ ನಡೆಸಿ ಯೋಜನೆಯ ಬಗ್ಗೆ ಸೂಕ್ತ ಮಾಹಿತಿ ನೀಡಿ, ಅರ್ಜಿ ಸಲ್ಲಿಸುವಂತೆ ಪ್ರೋತ್ಸಾಹಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಸಾರ್ವಜನಿಕ ರುದ್ರ ಭೂಮಿ ಸ್ಥಾಪನೆ, ಕಂದಾಯ ಗ್ರಾಮಗಳ ರಚನೆ, ಪೋಡಿ ಪ್ರಕರಣಗಳ ವಿಲೇವಾರಿ ಸೇರಿದಂತೆ ನಾನಾ ವಿಷಯಗಳ ಕುರಿತು ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ರುದ್ರೇಶ್ ಗಾಳಿ, ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಅಕ್ಷಯ್ ಶ್ರೀಧರ್, ಭಂವರ್ ಸಿಂಗ್ ಮೀನಾ, ತಹಸೀಲ್ದಾರರಾದ ಕೀರ್ತಿ ಚಾಲಕ್, ಅಣ್ಣಾರಾವ ಪಾಟೀಲ್, ಚಂದ್ರಶೇಖರ.ಎA, ಸಾವಿತ್ರಿ ಸಲಗರ್, ನಾಗಯ್ಯ ಹಿರೇಮಠ ಹಾಗೂ ಇತರರು ಉಪಸ್ಥಿತರಿದ್ದರು.
Date:13-11-2019
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















