ನ್ಯಾಯಾಲಯದ ಆದೇಶಕ್ಕೆ ಗೌರವ ನೀಡಬೇಕು : ಸಂಭ್ರಮ ಪ್ರತಿಭಟನೆಗೆ ಅವಕಾಶ ಇಲ್ಲ.
ನ್ಯಾಯಾಲಯದ ಆದೇಶಕ್ಕೆ ಗೌರವ ನೀಡಬೇಕು : ಸಂಭ್ರಮ ಪ್ರತಿಭಟನೆಗೆ ಅವಕಾಶ ಇಲ್ಲ.
ಹುಮನಾಬಾದ-ಮಾ:15; ಹೈಕೋರ್ಟ್‌ನಲ್ಲಿ ಇಂದು ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಬಸವಕಲ್ಯಾಣ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ಅಧಿಕಾರಿಗಳ ಸಭೆ ಜರುಗಿತು.
ಸಭೆಯಲ್ಲಿ ಮಾತನಾಡಿದ ಸಹಾಯಕ ಆಯುಕ್ತರಾದ ರಮೇಶ ಕೊಳಾರ, ನ್ಯಾಯಾಲಯದಿಂದ ಪರ ಅಥವಾ ವಿರೋಧ ಯಾವುದೇ ಆದೇಶ ಬಂದರೂ ಅದನ್ನು ಎಲ್ಲರೂ ಶಾಂತಿಯಿಂದ ಅನುಸರಿಸಬೇಕು. ಯಾವುದೇ ಸಂಭ್ರಮ ವಾಗಲಿ ಪ್ರತಿಭಟನೆ ಮಾಡುವುದಾಗಲಿ ಅವಕಾಶ ಇರುವುದಿಲ್ಲ. ಸರ್ಕಾರದ ಹಾಗೂ ನ್ಯಾಯಾಲಯದ ಆದೇಶವನ್ನು ಪ್ರತಿಯೊಬ್ಬರು ಪಾಲಿಸಬೇಕು. ಎಲ್ಲಾ ಸೂಚನೆಗಳು ಸೂಕ್ಷ್ಮವಾಗಿ ಗಮನಹತಿಸಬೇಕು. ಯಾವುದೇ ಶಾಲಾ, ಕಾಲೇಜುಗಳಲ್ಲಿ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಮುಖವಾಗಿ ಕಾಲೇಜಿನ ಸಿಬ್ಬಂದಿಗಳು ಕಟ್ಟುನಿಟ್ಟಾಗಿ ನಿಯಮಗಳು ಅನುಸರಿಸಬೇಕು. ಇದು ಒಂದು ಸೂಕ್ಷ್ಮ ವಿಷಯವಾಗಿದ್ದು ಯಾರೂ ಕೂಡ ನಿರ್ಲಕ್ಷತನ ಮಾಡಬಾರದು ಎಂದು ತಿಳಿಸಿದರು. ಈಗಾಗಲೇ ಜಿಲ್ಲಾಧಿಕಾರಿಗಳು ಇಂದಿನಿಂದ ಮಾ.21 ರ ವರೆಗೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ಆದೇಶ ಕೂಡ ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ಎಲ್ಲರೂ ಕಾಳಜಿವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ ಜಯಶ್ರೀ, ತಾಪಂ ಇಒ ಮುರಗೆಪ್ಪ, ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ಇತರೆ ಅಧಿಕಾರುಗಳು ಇದ್ದರು.
Date: 15-03-2022 ; Time 8:45AM
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















