ನ.1 ರಾಜೋತ್ಸವ ಅದ್ದೂರಿ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ
ಪೂರ್ವಭಾವಿ ಸಭೆ
ಬೀದರ:18OCT19: ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಹೆಚ್.ಆರ್ ಮಹಾದೇವ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನ.1 ರಂದು ಬೆಳಗ್ಗೆ 7.30 ಗಂಟೆಗೆ ಎಲ್ಲಾ ಸರ್ಕಾರಿ, ಸಂಘ ಸಂಸ್ಥೆಗಳು, ಅನುದಾನಿತ ಶಾಲಾ ಕಾಲೇಜುಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯೊÃತ್ಸವವನ್ನು ಆಚರಿಸಬೇಕು. ಕಚೇರಿ ಕಟ್ಟಡಗಳಲ್ಲಿ ದೀಪಾಲಂಕಾರ ಮಾಡುವಂತೆ ನಿರ್ದೇಶನ ನೀಡಿದರು.
ಅಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪೂಜೆ ನೆರವೇರಿಸಿ, ಅಲಂಕೃತ ವಾಹನದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ. ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಕಲಾ ತಂಡಗಳೊಂದಿಗೆ ಸಾಗುವ ಮೆರವಣಿಗೆ ನಗರದ ಪ್ರಮುಖ ರಸ್ತೆಗಳ ಮೂಲಕ ಮಂಗಲಪೇಟ್ನಲ್ಲಿರುವ ಪೊಲೀಸ್ ಕವಾಯತು ಮೈದಾನಕ್ಕೆ ತಲುಪಲಿದೆ. ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ನಗರದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ತಮ್ಮ ಶಾಲೆಯ ಬ್ಯಾನರ್, ಸಮವಸ್ತç, ಬ್ಯಾಂಡ್ನೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಬೇಕು. ಮೆರವಣಿಗೆಯ ಪ್ರತಿ ಹಂತದಲ್ಲಿ ಒಬ್ಬ ದೈಹಿಕ ಶಿಕ್ಷಕರನ್ನು ನಿಯೋಜಿಸಿ ಮೆರವಣಿಗೆಯು ಶಿಸ್ತುಬದ್ಧವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಬಾಳೆಹಣ್ಣು, ಬಿಸ್ಕೆಟ್ ವಿತರಿಸಬೇಕು. ನಗರದ ಎಲ್ಲಾ ವೃತ್ತಗಳ ಮೇಲೆ ದೀಪಾಲಂಕಾರ ಮಾಡುವುದು, ಮೆರವಣಿಗೆ ಹಾದು ಹೋಗುವ ಸ್ಥಳಗಳಲ್ಲಿ, ಪೊಲೀಸ್ ಮೈದಾನವನ್ನು ಶುಚಿಗೊಳಿಸಲು ಕ್ರಮ ವಹಿಸುವಂತೆ ನಗರಸಭೆ ಪೌರಾಯುಕ್ತರಿಗೆ ನಿರ್ದೇಶನ ನೀಡಿದರು.
ಮೆರವಣಿಗೆಯನ್ನು ಇನ್ನಷ್ಟು ಆಕರ್ಷಕವಾಗಿಸಲು ಜಿಲ್ಲೆಯ ಎರಡು ಹಾಗೂ ಹೊರ ಜಿಲ್ಲೆಯ ಎರಡು ಕಲಾ ತಂಡಗಳನ್ನು ನಿಯೋಜಿಸಬೇಕು. ಸಂಜೆ ಜಿಲ್ಲಾ ರಂಗಮಂದಿರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿಯವರು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಸುರೇಶ ಚೆನ್ನಶೆಟ್ಟಿ ಅವರು ಮಾತನಾಡಿ, ಕನ್ನಡ ರಾಜ್ಯೋತ್ಸವದ ನಿಮಿತ್ತ ಶಾಲಾ ಕಾಲೇಜುಗಳಲ್ಲಿ ನಡೆಸಲಾಗುವ ಭಾಷಣ, ನಿಬಂಧ ಸ್ಪರ್ಧೆಯೊಂದಿಗೆ ಪ್ರೌಢ ಶಲಾ ವಿದ್ಯಾರ್ಥಿಗಳಿಗೆ ಶುದ್ಧ ಬರಹ ಸ್ಪರ್ಧೆಯನ್ನು ಏರ್ಪಡಿಸಬೇಕು ಎಂದು ಸಲಹೆ ಮಾಡಿದರು. ಇದಕ್ಕೆ ಜಿಲ್ಲಾಧಿಕಾರಿಯವರು ಒಪ್ಪಿಗೆ ಸೂಚಿಸಿ, ವಿಜೇತರಿಗೆ ಸೂಕ್ತ ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಿವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪತ್ರಕರ್ತರಾದ ಶಿವಶರಣಪ್ಪ ವಾಲಿ ಅವರು ಮಾತನಾಡಿ, ಜಿಲ್ಲೆಯಲ್ಲಿರುವ ಅಂಗಡಿಗಳ ನಾಮ ಫಲಕಗಳು ಕನ್ನಡದಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಜಗನ್ನಾಥ ಹೆಬ್ಬಾಳೆ ಮಾತನಾಡಿ, ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಅಥವಾ ಇತರೆ ದಿನಾಚರಣೆಗಳಲ್ಲಿ ರಚಿಸಲಾದ ಸನ್ಮಾನ ಸಮಿತಿ ಸದಸ್ಯರನ್ನು ಬದಲಾಯಿಸಬೇಕು ಎಂದು ಕೋರಿದರು.
ಸಭೆಯಲ್ಲಿ ಸನ್ಮಾನ ಸಮಿತಿ, ಮೆರವಣಿಗೆ ಸಮಿತಿ ಸೇರಿದಂತೆ ವಿವಿಧ ಸಮಿತಿಗಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ, ಅಪರ ಜಿಲ್ಲಾಧಿಕಾರಿಗಳಾದ ರುದ್ರೇಶ ಗಾಳಿ, ನಗರಸಭೆ ಪೌರಾಯುಕ್ತರಾದ ಬಿ.ಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಮುಖಂಡರಾದ ಅನೀಲ ಬೆಲ್ದಾರ, ರಾಜು ಕಡ್ಯಾಳ, ಶ್ರೀಮಂತ ಸಪಾಟೆ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















