ನ.17 ಎನ್‌ಟಿಎಸ್‌ಸಿ/ಎನ್‌ಎಮ್‌ಎಮ್‌ಎಸ್ ಪರೀಕ್ಷೆ
ಬೀದರ: ಎನ್‌ಟಿಎಸ್‌ಸಿ/ಎನ್‌ಎಮ್‌ಎಮ್‌ಎಸ್ ಪರೀಕ್ಷೆಗಳು ನ.17ರಂದು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಆಯಾ ಶಾಲೆಯ ಮುಖ್ಯಗುರುಗಳು ಕೆಎಸ್‌ಇಇಬಿ ವೆಬ್‌ಸೈಟ್‌ನಲ್ಲಿ ತಮ್ಮ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. 8ನೇ ತರಗತಿಯ ಎನ್‌ಎಮ್‌ಎಮ್‌ಎಸ್ ಪರೀಕ್ಷೆಗಳು ಬೀದರ್‌ನ ವಿದ್ಯಾರಣ್ಯ ಪ್ರೌಢ ಶಾಲೆ, ಇಂದೀರಾಬಾಯಿ ಗುರುತಪ್ಪಾ ಶೆಟಕಾರ ಪ್ರೌಢ ಶಾಲೆಯಲ್ಲಿ ಹಾಗೂ 10ನೇ ತರಗತಿಯ ಎನ್‌ಟಿಎಸ್‌ಇ ಪರೀಕ್ಷೆಗಳು ಬೀದರ್‌ನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕರ್ನಾಟಕ ಪ್ರೌಢ ಶಾಲೆ, ಜೀಜಾಮಾತಾ ಕನ್ಯಾ ಪ್ರೌಢ ಶಾಲೆಯಲ್ಲಿ ನಡೆಯಲಿವೆ. ಎಲ್ಲಾ ವಿದ್ಯಾರ್ಥಿಗಳು ತಮಗೆ ಹಂಚಿಕೆಯಾದ ಪರೀಕ್ಷಾ ಕೇಂದ್ರಕ್ಕೆ ಸಕಾಲದಲ್ಲಿ ಹಾಜರಾಗಿ ಪರೀಕ್ಷೆ ಬರೆಯುವಂತೆ ಬೀದರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Date: 15-11-2019
ಕಲಬುರಗಿ: ವಿದ್ಯುತ್ ಅವಘಡಗಳಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
*ಮುನ್ನೆಚ್ಚರಿಕೆ ವಹಿಸಿ; ವಿದ್ಯುತ್ ಅವಘಡ ತಪ್ಪಿಸಿ* *ಮಳೆಗಾಲ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುರಕ್ಷತಾ …

















