Home ನಿಮ್ಮ ಜಿಲ್ಲೆ ಬೆಂಗಳೂರು ಪುಂಡರಿಗೆ ಖಡಕ್ ಸಂದೇಶ ನೀಡಿದ ಮುಖ್ಯಮಂತ್ರಿ

ಪುಂಡರಿಗೆ ಖಡಕ್ ಸಂದೇಶ ನೀಡಿದ ಮುಖ್ಯಮಂತ್ರಿ

ಪುಂಡರಿಗೆ ಖಡಕ್ ಸಂದೇಶ ನೀಡಿದ ಮುಖ್ಯಮಂತ್ರಿ.

ಬೆಳಗಾವಿ: ಡಿಸೆಂಬರ್ 19; ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟು,  ಕನ್ನಡಿಗರ ವಾಹನಗಳ ಮೇಲೆ ದಾಳಿ ಮಾಡಿ ಪುಂಡಾಟಿಕೆ ಮಾಡುತ್ತಿರುವ ಎಂಇಎಸ್ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಪುಂಡರಿಗೆ ಖಡಕ್ ಸಂದೇಶ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ ಆಗಿದೆ. ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ. ಇಂತಹ ಘಟನೆ ನಡೆಯದಂತೆ ದೀರ್ಘಾವಧಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ” ಎಂದು ಹೇಳಿದ್ದಾರೆ.

Date: 18-12-2021 :

Main

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…