Home ನಿಮ್ಮ ಜಿಲ್ಲೆ ಬೀದರ ಬಡವರಿಗೆ ಉತ್ತಮ ಆರೋಗ್ಯ ಸೇವೆ ದೊರೆಯುವಂತೆ ಮಾಡಿ – ಶಾಸಕ ಪಾಟೀಲ.

ಬಡವರಿಗೆ ಉತ್ತಮ ಆರೋಗ್ಯ ಸೇವೆ ದೊರೆಯುವಂತೆ ಮಾಡಿ – ಶಾಸಕ ಪಾಟೀಲ.

ಬಡವರಿಗೆ ಉತ್ತಮ ಆರೋಗ್ಯ ಸೇವೆ ದೊರೆಯುವಂತೆ ಮಾಡಿ – ಶಾಸಕ ಪಾಟೀಲ.

ಹುಡಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

ಹುಮನಾಬಾದ: ತಾಲೂಕಿನ ಹುಡಗಿ ಗ್ರಾಮದಲ್ಲಿ 1.60 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಶಾಸಕ ರಾಜಶೇಖರ ಪಾಟೀಲ ಭಾನುವಾರ ಉದ್ಘಾಟಿಸಿದರು.

ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಾಜಶೇಖರ ಪಾಟೀಲ, ಹಳ್ಳಿಖೇಡ ಬಿ ಪಟ್ಟಣದಲ್ಲಿ ನಿರ್ಮಾಣ ಆಗಬೇಕಾದ ಕಟ್ಟಡ ಹುಡಗಿ ಗ್ರಾಮಕ್ಕೆ ಬಂದಿದ್ದು, ಗುಣಮಟ್ಟದ ಕಾಮಗಾರಿ ಮಾಡಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರ ಸಂಖ್ಯೆ ಹೆಚ್ಚು ಬೇಕು ಎಂಬ ಬೇಡಿಕೆ ಇದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ ವಹಿಸುತ್ತಾರೆ ಎಂದು ತಿಳಿಸಿದರು.

37 ಸಾವಿರ ಜನ ಸಂಖ್ಯೆ ಇರುವ ಕಡೆ ಆಸ್ಪತ್ರೆ ನಿರ್ಮಾಣವಾಗಿದ್ದು, ಈ ಭಾಗದ ಜನರು ಆಸ್ಪತ್ರೆಯ ಲಾಭ ಪಡೆಯಬೇಕು. ಸರ್ಕಾರ ವಿವಿಧ ಯೋಜನೆಗಳ ಮೂಲಕ ಜನರಿಗೆ ಉತ್ತಮ ಆರೋಗ್ಯ ಸೇವ ನೀಡುವ ಕೆಲಸ ಮಾಡಲಾಗುತ್ತಿದೆ. ವೈದ್ಯರು ಆಸ್ಪತ್ರೆಗೆ ಬರುವ ಬಡ ಜನರಿಗೆ ಉತ್ತಮ ಸೇವೆ ನೀಡಬೇಕು ಎಂದು ತಿಳಿಸಿದರು.

ಕೊರೊನಾ ಹಾವಳಿ ತಡೆಯುವ ನಿಟ್ಟಿನಲ್ಲಿ ಎಲ್ಲರೂ ನಿಯಮಗಳು ಪಾಲಿಸಬೇಕು. ಮಹಾಮಾರಿ ರೋಗ ಬರದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಕಡ್ಡಾಯ ಮಾಸ್ಕ್ ಹಾಕಬೇಕು ಎಂದು ತಿಳಿಸಿದರು.

ಡಾ.ವಿ.ಜಿ ಪಾಟೀಲ ಮಾತನಾಡಿ, 6 ಬೇಡ್ ಆಸ್ಪತ್ರೆ ಉದ್ಘಾಟನೆ ಮಾಡಿದ್ದು, ಆಸ್ಪತ್ರೆಗೆ ಬೇಕಾದ ವಿವಿಧ ಸೌಲಭ್ಯಗಳು ಕಲ್ಪಿಸುವ ಕೆಲಸ ಮಾಡಲಾಗುವುದು. ಆರೋಗ್ಯ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಜನರ ಆರೋಗ್ಯದ ಸಮಸ್ಯೆ ಕುರಿತು ಸರ್ವೆಮಾಡಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಡಾ। ಚಂದ್ರಶೇಖರ ಪಾಟೀಲ, ತಾಲೂಕು ಪಂಚಾಯತ ಅಧ್ಯಕ್ಷ ರಮೇಶ ಡಾಕುಳಗಿ, ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪಾ ದಾನ, ಜಿಲ್ಲಾ ಆರೋಗ್ಯಾಧಿಕಾರಿ ಡಾ। ವಿ.ಜಿ ಪಾಟೀಲ, ತಾಲೂಕು ಆರೋಗ್ಯಾಧಿಕಾರಿ ಅಶೋಕ ಮೈಲಾರೆ, ತಾಲೂಕು ಪಂಚಾಯತ ಇಒ ವೈಜಿನಾಥ ಫುಲೆ, ಡಾ। ಗೊವಿಂದ್, ಸಿಡಿಪಿಓ ಶೋಭಾ, ಗ್ರಾಮ ಪಂಚಾಯತ ಅಧ್ಯಕ್ಷೆ ಶಕುಂತಲಾ ಶಾಮರಾವ ಸಂಗಶೆಟ್ಟಿ, ಉಪಾಧ್ಯಕ್ಷ ಪ್ರಭು ಮಾಳೆ, ಪಿಎಲ್ಡಿ ಬ್ಯಾಕ್ ಅಧ್ಯಕ್ಷ ಮಲ್ಲಿಕಾರ್ಜುನ ಮಾಶೆಟ್ಟಿ, ಡಾ। ವಿಜಯಕುಮಾರ ಸೂರ್ಯವಂಶಿ, ಅಫ್ಸರ್ ಮಿಯ್ಯಾ, ಅಣ್ಣಾರಾವ ಪಾಟೀಲ, ಗ್ರಾ.ಪಂ ಅಧಿಕಾರಿ ಮಲಪ್ಪ ಸೊನಾದ, ಗುರು ಮುಗುಳಿ ಸೇರಿದಂತೆ ಅನೇಕರು ಇದ್ದರು.

 

Date:28-06-2020  www.kknewsonline.in

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…