ಬಸವಕಲ್ಯಾಣ – 5 ಲಕ್ಷ ಮೌಲ್ಯದ ಗಾಂಜಾ ಜಪ್ತಿ
ಬಸವಕಲ್ಯಾಣ – 5 ಲಕ್ಷ ಮೌಲ್ಯದ ಗಾಂಜಾ ಜಪ್ತಿ
ಬೀದರ: 72 ಕೆಜಿ ಗಾಂಜಾ ಮಹಾರಾಷ್ಟ್ರಕ್ಕೆ ಸಾಗಿಸಲು ಮುಂದಾಗಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಬಸವಕಲ್ಯಾಣ ಪೊಲೀಸ್ ಠಾಣೆಯ ಪಿಎಸ್ಐ ಗುರು ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿ ಮೂರು ಜನ ಆರೋಪಿಗಳು ಹಾಗೂ ಗಾಂಜಾ ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ.

ಮಲ್ಲಿಕಾರ್ಜುನ ಸಗರ, ಸಿದ್ರಾಮ ಗುದಗೆ, ಛಾಯಾ ಭೋಸರೆ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಸಸ್ತಾಪೂರ ಬಂಗ್ಲಾ ಹತ್ತಿರದ ಹೊಲವೊಂದರಲ್ಲಿ ಗಾಂಜಾ ಸಾಗಟ್ಟದ ಬಗ್ಗೆ ಚಟುವಟಿಕೆಗಳು ನಡೆಯುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಡಿ.ಎಲ್ ನಾಗೇಶ, ಹೆಚ್ಚುವರಿ ಎಸ್.ಪಿ ಗೋಪಾಲ ಅವರ ಮಾರ್ಗಾದರ್ಶನದಲ್ಲಿ ಡಿವೈಎಸ್ಪಿ ಸೋಮಲಿಂಗ ಕುಂಬಾರ, ಸಿಪಿಐ ಜೆ.ಎಸ್ ನ್ಯಾಮೇಗೌಡರ್ ಹಾಗೂ ಪಿಎಸ್ಐ ಜಿ.ಎಮ್ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸುಮಾರು 5 ಲಕ್ಷ ಮೌಲ್ಯದ ಗಾಂಜಾ ಹಾಗೂ ವಾಹನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಸುದ್ದಿಗಳಿಗಾಗಿ ಓದಿ ಕಸ್ತೂರಿ ಕಿರಣ ಪತ್ರಿಕೆ

Date: 19-12-2020: www.kknewsonline.in
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















