ಬೀದರ್‌ನಲ್ಲಿ ರಾಜ್ಯಮಟ್ಟದ ಪಶುಮೇಳ: ಸಿದ್ಧತೆಗೆ ಸಚಿವರ ಸೂಚನೆ
ಬೀದರ: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಬೀದರ ಜಿಲ್ಲೆಯಲ್ಲಿ ಫೆಬ್ರವರಿ 7ರಿಂದ 9ರವರೆಗೆ ರಾಜ್ಯಮಟ್ಟದ ಪಶುಮೇಳವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪಶುಸಂಗೋಪನೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು.ಬಿ.ಚವ್ಹಾಣ್ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜ.13ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮ ನಡೆಯುವ ಸ್ಥಳದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ಣಯಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸುವರು. ಉಪ ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ. ಮೂರು ದಿನಗಳವರೆಗೆ ನಡೆಯುವ ಈ ಉತ್ಸವದಲ್ಲಿ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದ್ದು, ಯಾವುದೇ ವಿಷಯದಲ್ಲಿ ಲೋಪಗಳು ಜರುಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಪಶುಸಂಗೋಪನೆಯಲ್ಲಿ ಆದ ನೂತನ ಸಂಶೋಧನೆ, ಆವಿಷ್ಕಾರಗಳನ್ನು ರೈತರಿಗೆ ಪರಿಚಯಿಸುವುದು, ಸಾಧನೆಗೈದ ರೈತರಿಂದ ಇತರೆ ರೈತರಿಗೆ ಪ್ರೇರಣೆ ನೀಡುವುದು, ನಿರುದ್ಯೋಗಿ ಯುವ ಯುವತಿಯರಿಗೆ ಪಶುಸಂಗೋಪನೆಯಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡುವುದು, ಒಂದೇ ಸೂರಿನಡಿ ಇಲಾಖೆಯ ಯೋಜನೆ ಮತ್ತು ಸಾಧನೆಗಳ ಪರಿಚಯ ಮತ್ತು ಉಪಯುಕ್ತತೆಯ ಬಗ್ಗೆ ಮಾಹಿತಿ ನೀಡುವುದು, ರೈತರಿಗೆ ವಿವಿಧ ಜಾನುವಾರು ತಳಿಗಳ ಹಾಗೂ ಕೋಳಿ ತಳಿಗಳ ಪ್ರದರ್ಶನ ಮತ್ತು ಅವುಗಳ ಉತ್ಪಾದಕತೆಯ ವೈಜ್ಞಾನಿಕ ಮಾಹಿತಿ ನೀಡುವುದು ಈ ಪಶುಮೇಳದ ಉದ್ದೇಶವಾಗಿದ್ದು, 90 ಜಾನುವಾರು ಪ್ರದರ್ಶನ ಮಳಿಗೆಗಳು ಹಾಗೂ 100 ವಾಣಿಜ್ಯ ಮಳಿಗೆಗಳು, ವಿವಿಧ ತಳಿಯ ಜಾನುವಾರುಗಳ ಪ್ರದರ್ಶನ ಏರ್ಪಡಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.
ದೇಶಿಯ ಜಾನುವಾರು ತಳಿಗಳಾದ ಅಮೃತ ಮಹಲ್, ಹಳ್ಳಿಕಾರ್, ಖಿಲ್ಲಾರಿ, ದೇವಣಿ, ಕೃಷ್ಣಾವ್ಯಾಲಿ, ಓಂಗೋಲ್, ತಾರ್‌ಪಾರ್ಕರ್, ಮಲ್ನಾಡ್ ಗಿಡ್ಡ, ಗಿರ್, ವಿದೇಶಿ ಜಾನುವಾರು ತಳಿಗಳಾದ ಹೆಚ್.ಎಫ್, ಜೆರ್ಸಿ ತಳಿಗಳು ಹಾಗೂ ಕುರಿ, ಮೇಕೆ, ಎಮ್ಮೆ, ಹಂದಿ, ದೇಶಿ ಕೋಳಿ ತಳಿಗಳು ಹೀಗೆ ಸುಮಾರು 400ರವರೆಗೆ ತಳಿಗಳನ್ನು ಪ್ರದರ್ಶಿಸಲು ವ್ಯವಸ್ಥೆ ಮಾಡಲಾಗುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳು, ಮತ್ತು ಹೊರರಾಜ್ಯದ ರೈತರು ಭಾಗವಹಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಲು ಪ್ರಯತ್ನಿಸಬೇಕು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ರಾಜ್ಯಮಟ್ಟದಲ್ಲಿ ಈಗಾಗಲೇ ಸಮಿತಿಗಳನ್ನು ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿಯೂ ಸಮಿತಿಗಳನ್ನು ರಚಿಸಿ, ಜವಾಬ್ದಾರಿ ಹಂಚಿಕೆ ಮಾಡಬೇಕು. ಎಲ್ಲ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ಕರೆದು ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಹಾಗೂ ರಾಜ್ಯವಲಯದ ವ್ಯಾಪ್ತಿಯ ಎಲ್ಲಾ ಇಲಾಖೆಗಳು ಪ್ರದರ್ಶನ ಮಳಿಗೆಗಳನ್ನು ತೆರೆಯಬೇಕು. ಸ್ಥಳಿಯ ಚುನಾಯಿತ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಎಲ್ಲ ಗ್ರಾಮಗಳಲ್ಲಿ ಶಾಲಾ ಮಕ್ಕಳಿಂದ ಜಾಥಾ ನಡೆಸಿ ಗ್ರಾಮಸ್ಥರಿಗೆ ಕಾರ್ಯಕ್ರಮದ ಬಗ್ಗೆ ತಿಳಿಸಬೇಕು. ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸುವ ವ್ಯವಸ್ಥೆ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು. ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪಶುಮೇಳದ ಪ್ರಾರಂಭದ ಮುನ್ನ ಹಾಗೂ ಕಾರ್ಯಕ್ರಮ ನಡೆಯುವ ದಿನಗಳಂದು ಸ್ವಚ್ಛತೆಗೆ ಕ್ರಮವಹಿಸಬೇಕು. ತಾತ್ಕಾಲಿಕ ಶೌಚಾಲಯಗಳ ನಿರ್ಮಾಣ ಮತ್ತು ಟ್ಯಾಂಕರ್‌ಗಳಿAದ ನೀರು ಸರಬರಾಜು ಮಾಡುವಂತೆ ಬೀದರ ನಗರಸಭೆಯ ಪೌರಾಯುಕ್ತರಿಗೆ ಸೂಚಿಸಿದರು.
ಸ್ವ ಸಹಾಯ ಸಂಘದಿAದ ಉತ್ಪಾದಿಸಲಾದ ಉತ್ಪನ್ನಗಳನ್ನು ಪಶುಮೇಳÀದಲ್ಲಿ ಮಾರಾಟ ಮಾಡಲು ವ್ಯವಸ್ಥೆ ಮಾಡಬೇಕು ಮತ್ತು ಸ್ವ ಸಹಾಯ ಗುಂಪಿನ ಸದಸ್ಯರು ಭಾಗವಹಿಸಲು ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು. ಪಶುಮೇಳದಲ್ಲಿ ಯಾವುದೇ ಅವಘಡಗಳು ಸಂಭವಿಸದAತೆ ಮುನ್ನೆಚರಿಕೆ ಕ್ರಮ ವಹಿಸಬೇಕು ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾರ್ಯಕ್ರಮದ ಸ್ಥಳದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ತೆರೆದು, ವೈದ್ಯರು ಮತ್ತು ಸಿಬ್ಬಂದಿಯನ್ನು ನಿಯೋಜಿಸಬೇಕು. ಔಷಧ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಹಾಗೂ ಎರಡು ಆ್ಯಂಬುಲೆನ್ಸ್ ವಾಹನಗಳ ವ್ಯವಸ್ಥೆ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಪಶುಮೇಳದಲ್ಲಿ ಸಾಕಷ್ಟು ರೈತರು ಮತ್ತು ಸಾರ್ವಜನಿಕರು ಆಗಮಿಸುತ್ತಾರೆ. ಇವರಿಗೆ ಮನರಂಜನೆ ನೀಡಲು ಉತ್ತಮ ಕಲಾತಂಡಗಳನ್ನು ನಿಯೋಜಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು. ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರಪಡಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಪಶುಮೇಳ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರನ್ನು ಉಚಿತವಾಗಿ ಬೀದರ್‌ನಿಂದ ನಂದಿನಗರಕ್ಕೆ ಕರೆತರುವ ವ್ಯವಸ್ಥೆ ಮತ್ತು ತಾಲೂಕು ಬಸ್ ನಿಲ್ದಾಣದಿಂದ ಹೋಗಿ ಬರಲು ಬಸ್ ವ್ಯವಸ್ಥೆ ಮಾಡಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ, ಪ್ರಗತಿಪರ ರೈತರನ್ನು ಕರೆತರುವುದು ಮತ್ತು ಇಲಾಖೆಯ ಪ್ರದರ್ಶನ ಮಳಿಗೆ ಏರ್ಪಡಿಸುವಂತೆ ಕೃಷಿ, ರೇಷ್ಮೆ, ತೋಟಗಾರಿಕೆ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರನ್ನು ಹಾಗೂ ಹಾಲು ಉತ್ಪಾದಕರನ್ನು ಪಶು ಮೇಳದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಮತ್ತು ಹಾಲು ಮತ್ತು ಅದರ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯುವಂತೆ ಕೆ.ಎಂ.ಎಫ್ ಅಧಿಕಾರಿಗಳಿಗೆ ಸೂಚಿಸಿದರು.
ರೈತರ ಸಂವಾದ ಕಾರ್ಯಕ್ರಮಗಳಿಗೆ ತಜ್ಞರನ್ನು ಕರೆಸುವುದು, ವಿದ್ಯಾರ್ಥಿಗಳು, ಅಧಿಕಾರಿಗಳು ಮತ್ತು ಸಿಬ್ಬಂದಿ ಪಶುಮೇಳದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳುವುದು, ರೈತ ಭವನ, ಅತಿಥಿ ಗ್ರಹಗಳು ಮತ್ತು ಇತರೆ ಅವಶ್ಯಕ ಕೋಣೆಗಳನ್ನು ಒದಗಿಸುವುದು ಸೇರಿದಂತೆ ಇಲಾಖೆಯ ಸಂಪರ್ಕದಲ್ಲಿದ್ದು, ಕಾರ್ಯಕ್ರಮದ ಆರಂಭದಿAದ ಅಂತ್ಯದವರೆಗೆ ಎಲ್ಲ ಸಹಕಾರ ನೀಡುವಂತೆ ಪಶುವೈದ್ಯಕೀಯ ಮಹಾವಿದ್ಯಾಲಯದ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಸಚಿವರು ರಾಜ್ಯಮಟ್ಟದ ಪಶುಮೇಳ ಕುರಿತ ಬ್ಯಾನರ್, ಭಿತ್ತಿಪತ್ರಗಳು ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಗೀತಾ ಪಂಡಿತರಾವ್ ಚಿದ್ರಿ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪೂರೆ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರಾದ ನಟೇಶ್, ನಿರ್ದೇಶಕರಾದ ಡಾ.ಎಂ.ಟಿ.ಮAಜುನಾಥ, ಅಪರ ನಿರ್ದೇಶಕರಾದ ಡಾ.ಮಂಜುನಾಥ ಪಾಳೆಗಾರ್, ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗ್ಯಾನೇಂದ್ರಕುಮಾರ ಗಂಗವಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Date: 13-01-2020 Time:6:15PM
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















