Home ನಿಮ್ಮ ಜಿಲ್ಲೆ ಬೀದರ ಬೀದರ ಅದ್ದೂರಿ ಕನ್ನಡ ರಾಜ್ಯೋತ್ಸವ

ಬೀದರ ಅದ್ದೂರಿ ಕನ್ನಡ ರಾಜ್ಯೋತ್ಸವ

ಬೀದರ: ಜಿಲ್ಲಾಡಳಿತದಿಂದ ನಗರದ ಮಂಗಲಪೇಟ್‌ನ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಿದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಧ್ವಜಾರೋಹಣ ನೇರೆವರಿಸಿದರು.

ಇದೇ ಸಂದರ್ಭದಲ್ಲಿ ಪೊಲೀಸ್ ತುಕಡಿಗಳಿಂದ ಸಚಿವರು ಗೌರವ ವಂದನೆ ಸ್ವೀಕರಿಸಿದರು. ಬಳಿಕ ಡಿಎಆರ್, ಸಿವಿಲ್ ಪೊಲೀಸ್ ತಂಡ, ಗೃಹ ರಕ್ಷಕ ದಳ, ಅರಣ್ಯ ಇಲಾಖೆ, ಎನ್‌ಸಿಸಿ ತಂಡ, ಭಾರತೀಯ ಸೇವಾದಳ ತಂಡದವರು ಆಕರ್ಷಕ ಪಥ ಸಂಚಲನ ನಡೆಸಿದರು.

ಕಾರ್ಯಕ್ರಮದಲ್ಲಿ ಲೋಕಸಭೆ ಸದಸ್ಯ ಭಗವಂತ ಖೂಬಾ, ಶಾಸಕ ರಹೀಮ ಖಾನ್, ಶಾಸಕ ಬಂಡೆಪ್ಪ ಖಾಶೆಂಪೂರ, ವಿಧಾನ ಪರಿಷತ್ ಸದಸ್ಯ ರಘುನಾಥರಾವ ಮಲ್ಕಾಪುರೆ, ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ, ಜಿಲ್ಲಾಧಿಕಾರಿ ಡಾ| ಹೆಚ್.ಆರ್ ಮಹಾದೇವ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಸೇರಿದಂತೆ ಅನೇಕರು ಇದ್ದರು

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …