ಬೀದರ-ಎಸ್‌ಬಿಐ ಸಾಲ ಮೇಳಕ್ಕೆ ಚಾಲನೆ
ಬೀದರ: ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ ನಗರದ ಅಂಬೇಡ್ಕರ್ ವೃತದ ಬಳಿಯಿರುವ ಎಸ್‌ಬಿಐ ಶಾಖೆಯ ಆವರಣದಲ್ಲಿ ಜ.10ರಂದು ಹೋಮ್ ಲೋನ್ ಮೇಳಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಹಣಕಾಸು ನಿಯಂತ್ರಣಾಧಿಕಾರಿ ಡಾ.ಸಿ.ವಿ ರಾಜು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ಎಸ್‌ಬಿಐನಿಂದ ಸಾರ್ವಜನಿಕರಿಗಾಗಿ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮನೆ ನಿರ್ಮಾಣ ಮತ್ತು ನಿವೇಶನ ಖರೀದಿಗಾಗಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸಲಾಗುತ್ತಿದೆ. ಅಲ್ಲದೇ ವಾಹನಗಳ ಖರೀದಿ, ಇನ್ನಿತರೆ ಕೆಲಸ ಕಾರ್ಯಗಳಿಗೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಯೋಜನೆಗಳಿದ್ದು, ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.
ಎಸ್‌ಬಿಐ ಬೀದರ ಪ್ರಾದೇಶಿಕ ವ್ಯವಸ್ಥಾಪಕರಾದ ಕೆ.ಆರ್.ಶ್ರೀರಾಮ, ಚೀಫ್ ಮ್ಯಾನೇಜರ್ ಕೆ.ನಾಗರಾಜ್, ಚಂದ್ರಶೇಖರನ್ ಹಾಗೂ ಎಸ್‌ಬಿಐನ ವಿವಿಧ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ರಮೇಶ ಸಿಂಧೆ ಅವರು ನಿರೂಪಿಸಿದರು. ಉಮೇಶ ಜಾಧವ್ ವಂದಿಸಿದರು
Date: 10-01-2020 Time:6:10PM
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















