ಬೀದರ ಏರ್ಪೋರ್ಟ್ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ
ಬೀದರ: ಬೀದರ ನಾಗರಿಕ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶುಕ್ರವಾರ ಚಾಲನೆ ನೀಡಿದರು.
ಬೆಳ್ಳಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಟ್ರೂಜೆಟ್ ವಿಮಾನದ ಮೂಲಕ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದ್ದರು.
ಈ ಸಂದರ್ಭದಲ್ಲಿ ಮೊದಲಬಾರಿಗೆ ಆಗಮಿಸಿದ ವಿಮಾನಕ್ಕೆ ನೀರು ಎಳೆಯಲಾಯಿತು. ನಂತರ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಮಾತನಾಡಿ. ಬೀದರ ಜಿಲ್ಲೆಯ ಅಭಿವೃದ್ಧಿಯೇ ನಮ್ಮ ಗುರಿಯಾಗಿದೆ. ಈ ಕಾರ್ಯಕ್ಕೆ ಸಂಸದ ಭಗವಂತ ಖೂಬಾ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಎಲ್ಲರೂ ಸಹಕಾರ ನೀಡುತ್ತಿದ್ದಾರೆ ಎಂದರು.
ಸಂಸದ ಭಗವಂತ ಖೂಬಾ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿದ್ದ ಉಡಾನ್ ಯೋಜನೆ ಜಿಲ್ಲೆಯಲ್ಲಿ ಇದೀಗ ಆರಂಭವಾಗಿದೆ. ದೇಶದ ಬಡವರು ಕೂಡ ವಿಮಾನ ಹಾರಾಟ ಮಾಡಬೇಕೆಂಬ ಉದ್ದೇಶ ಪ್ರಧಾನಿಗಳು ಹೊಂದಿದ್ದರು. ಬೀದರ ಲೋಕಸಭೆಯ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಶ್ರಮಿಸುತ್ತಿದ್ದು, ಸರ್ಕಾರದ ಯೋಜನೆಗಳು ಕ್ಷೇತ್ರದಲ್ಲಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದ್ದರು.
ಈ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಸಂಸದ ಭಗವಂತ ಖೂಬಾ,ಕೆಪಿಸಿಸಿ ಕರ್ಯಾಧ್ಯಕ್ಷ ಹಾಗೂ ಭಾಲ್ಕಿ ಶಾಸಕ ಈಶ್ವರ ಖಂಡ್ರೆ,ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ರಾಜಶೇಖರ ಪಾಟೀಲ, ಬಂಡೆಪ್ಪ ಖಾಶೆಂಪೂರ್, ರಹೀಮ್ ಖಾನ್, ಶಾಸಕ ಬಿ.ನಾರಾಯಣರಾವ, ಸೂರ್ಯಕಾಂತ ನಾಗಮಾರಪಳ್ಳಿ, ಎಂಎಲ್ಸಿಗಳಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಡಾ| ಚಂದ್ರಶೇಖರ ಪಾಟೀಲ, ರಘುನಾಥ್ ಮಲ್ಕಾಪೂರೆ, ರತ್ನಪ್ರಭಾ, ಪ್ರಥಮ ದರ್ಜೆ ಗುತ್ತೆದಾರರಾದ ಗುರುನಾಥ ಕೊಳ್ಳುರ್ ಸೇರಿದಂತೆ ಅನೇಕ ನಾಯಕರು ಕಾರ್ಯಕ್ರಮದಲ್ಲಿ ಇದ್ದರು.
Date: 07-02-2020 Time: 1:05PM
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















