ಬೀದರ: ಗಾಂಧಿ ಗಂಜ್ ಪೊಲೀಸ್ ಠಾಣೆ ಸೀಲ್ ಡೌನ್
ಬೀದರ: ಗಾಂಧಿ ಗಂಜ್ ಪೊಲೀಸ್ ಠಾಣೆ ಸೀಲ್ ಡೌನ್
ಠಾಣೆಯ ಸಿಬ್ಬಂದಿಗೆ ಸೋಂಕು ಪತ್ತೆ ಹಿನ್ನೆಲೆ ಠಾಣೆ ತಾತ್ಕಾಲಿಕ ಸೀಲ್ ಡೌನ್
ಬೀದರ: ನಗರದ ಗಾಂಧಿ ಗಂಜ್ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೋವಿಡ್-19 ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು
ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಡಿ.ಎಲ್ ನಾಗೇಶ್, ಠಾಣೆಯ ಸೋಂಕಿತ ಸಿಬ್ಬಂದಿಯ ಸಂಪರ್ಕಕ್ಕೆ ಬಂದಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ಆದೇಶದ ವರೆಗೂ ಗಾಂಧಿ ಗಂಜ್ ಠಾಣೆಯ ಎಲ್ಲ ಕಾರ್ಯ ಚಟುವಟಿಕೆಗಳನ್ನು ನಗರದ ಮಾರ್ಕೆಟ್ ಪೊಲೀಸ್ ಠಾಣೆಯ ಪ್ರಾಂಗಣದಲ್ಲಿ ನೞೆಯಲ್ಲಿದ್ದು, ಸಾರ್ವಜನಿಕರು ಯಾವುದೇ ದೂರು, ಅಹವಾಲುಗಳನ್ನು ಅಲ್ಲಿಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಿಬ್ಬಂದಿಗೆ ಪಾಸಿಟಿವ್ ಬಂದಿರುವ ಹಿನ್ನೆಲೆ ಇತರೆ ಸಿಬ್ಬಂದಿಗಳು ಕೂಡ ಆತಂಕ ಪಡುವಂತಾಗಿದೆ.
Date: 28-062020 www.kknewsonline.in
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















