Home ನಿಮ್ಮ ಜಿಲ್ಲೆ ಬೀದರ ಬೀದರ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ‌ ಕರೊನಾ ಪಾಸಿಟಿವ್

ಬೀದರ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ‌ ಕರೊನಾ ಪಾಸಿಟಿವ್

ಬೀದರ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ‌ ಕರೊನಾ ಪಾಸಿಟಿವ್

ಬೀದರ: ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಬುಧವಾರ ರಾತ್ರಿ ಕರೊನಾ ಪಾಸಿಟಿವ್ ದೃಢಪಟ್ಟಿದೆ.

ಬೀದರ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಬಂದ ನಂತರ ನಿರಂತರ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ, ಅಲ್ಲದೆ ಪದೆ ಪದೆ ಆಸ್ಪತ್ರೆಗಳಿಗೆ ಭೇಟಿಮಾಡಿ ಕೋವಿಡ್ ಸೋಂಕಿತ ರೋಗಿಗಳ ಆರೋಗ್ಯ ವಿಚಾರಣೆ, ಕುಂದುಕೊರತೆಗಳ ನಿವಾರಣೆಯ ಕರ್ತವ್ಯದ ಸಂದರ್ಭದಲ್ಲಿ ಯಾರದೋ ಸಂಪರ್ಕದಿಂದ ಜಿಲ್ಲಾಧಿಕಾರಿಗೆ ಸೋಂಕು ತಗುಲಿರಬೇಕು ಎಂದು ಹೇಳಲಾಗುತ್ತಿದೆ.

ಸದ್ಯ ಜಿಲ್ಲಾಧಿಕಾರಿಗಳಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಬ್ರಿಮ್ಸ್ ವೈದ್ಯರು ಮಾಹಿತಿ ನೀಡಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾಧಿಕಾರಿಗಳು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

Date: 03-09-2020   www.kknewsonline.in

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…