ಬೀದರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ: ಹೆಸರು ನೋಂದಣಿ ವೆಬ್ಸೈಟ್ಗೆ ಚಾಲನೆ
ಬೀದರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ: ಹೆಸರು ನೋಂದಣಿ ವೆಬ್ಸೈಟ್ಗೆ ಚಾಲನೆ
ಬೀದರ, 06-02-21: ಬೀದರನ ನೆಹರೂ ಕ್ರೀಡಾಂಗಣದಲ್ಲಿ ಫೆ.12 ಮತ್ತು ಫೆ.13ರಂದು ಎರಡು ದಿನಗಳ ಕಾಲ ನಡೆಯಲಿರುವ 2020-21ನೇ ಸಾಲಿನ ಜಿಲ್ಲಾಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಬಯಸುವ ಕ್ರೀಡಾಪಟುಗಳ ಹೆಸರು ನೋಂದಣಿಗಾಗಿ ತಯಾರಿಸಿದ ವೆಬ್ಸೈಟ್ಗೆ ಅಪರ ಜಿಲ್ಲಾಧಿಕಾರಿಗಳಾದ ರುದ್ರೇಶ ಗಾಳಿ ಅವರು ಫೆ.4ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ರಾಜೇಂದ್ರಕುಮಾರ ಗಂದಗೆ ಅವರು, ನೌಕರರ ಹೆಸರು, ಹುದ್ದೆ, ಇಲಾಖೆಯ ಹೆಸರು, ಕೆಜೆಐಡಿ ಸಂಖ್ಯೆ, ವಾಟ್ಸ್ ಅಪ್ ನಂಬರ್ ಸೇರಿದಂತೆ ಅಗತ್ಯ ವಿವರಗಳನ್ನು ಆನ್ಲೈನ್ದಲ್ಲಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಇಡೀ ರಾಜ್ಯದಲ್ಲೇ ಮೊದಲು: ಮಾಹಿತಿ ತಂತ್ರಜ್ಞಾನದ ಸೌಕರ್ಯಗಳ ಸಾಧ್ಯತೆಗಳನ್ನು ಬಳಸಿಕೊಂಡು ಇಡೀ ರಾಜ್ಯದಲ್ಲೇ ಮೊದಲ ಬಾರಿಗೆ ಆನ್ಲೈನ್ ಮೂಲಕ ಹೆಸರು ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿರುವ ರಾಜೇಂದ್ರಕುಮಾರ ಗಂದಗೆ ಅವರು, ಈ ಬಾರಿ ನೇರ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಆನ್ಲೈನ್ದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಕಲ ಸಿದ್ಧತೆ: ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಹಕಾರದಿಂದಾಗಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಈಗಾಗಲೇ ಸಕಲ ರೀತಿಯ ಸಿದ್ಧತೆ ನಡೆದಿದೆ. ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಬೀದರನಲ್ಲಿ ನಡೆಸಲು ನೀಡಿದ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿಗಳು, ಇದಕ್ಕಾಗಿ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಸರ್ಕಾರದ ಹಂತದಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ ಎಂದು ಗಂದಗೆ ಅವರು ತಿಳಿಸಿದರು.
ತಾಂತ್ರಿಕ ಸಹಾಯಕ್ಕೆ ಸಂಪರ್ಕ: ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಸರ್ಕಾರಿ ನೌಕರರು ಮತ್ತು ಸಿಬ್ಬಂದಿಯು ಆನ್ಲೈನ್ದಲ್ಲಿ ಅರ್ಜಿ ಸಲ್ಲಿಸುವ ಹಾಗೂ ಇನ್ನಿತರ ಯಾವುದೇ ಹೆಚ್ಚಿನ ಮಾಹಿತಿಗಾಗಿ ಸತೀಶ ಪಾಟೀಲ ಮೊ:9590093837 ಅಥವಾ ಎಂ..ಎ.ಖುದ್ದೂಸ್ ಮೊ:9986113525 ಇವರನ್ನು ಸಂಪರ್ಕಿಸಬಹುದಾಗಿದೆ.
ವೆಬ್ಸೈಟ್ ಚಾಲನೆ ಸಮಾರಂಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್.ಜಿ.ನಾಡಗೀರ್, ರಾಜ್ಯ ಸರ್ಕಾರಿ ನೌಕರರ ಸಂಘದ ಬಸವರಾಜ್ ಜಕ್ಕಾ, ಯೋಗೇಂದ್ರ ಯದಲಾಪೂರೆ ಹಾಗೂ ಇನ್ನೀತರರು ಇದ್ದರು.
Date: 06-02-2021 : www.kknewsonline.in
:
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















