ಬೀದರ ಜಿಲ್ಲೆಯಲ್ಲಿ ನಿಲ್ಲದ ಕೊರೊನಾ ಹಾವಳಿ..!
ಮುಸ್ಲಿಂ ಬಾಂಧವರು ಮನೆಯಲ್ಲಿಯೇ ರಂಜಾನ್ ಆಚರಣೆಗೆ ಡಿ.ಸಿ ಮನವಿ
ಬೀದರ ಜಿಲ್ಲೆಯಲ್ಲಿ ನಿಲ್ಲದ ಕೊರೊನಾ ಹಾವಳಿ..!
ಮುಸ್ಲಿಂ ಬಾಂಧವರು ಮನೆಯಲ್ಲಿಯೇ ರಂಜಾನ್ ಆಚರಣೆಗೆ ಡಿ.ಸಿ ಮನವಿ
ಬೀದರಃ ಬೀದರ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು, ಈ ಬಾರಿ ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಅದ್ದೂರಿಯಾಗಿ ಮನೆಯಲ್ಲಿಯೇ ಆಚರಣೆ ಮಾಡಬೇಕು. ಸಾಮೂಹಿಕ ಪ್ರಾರ್ಥನೆಗೆ ಯಾವುದೇ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ವಿವಿಧಡೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಜಿಲ್ಲೆಯಲ್ಲಿ ಒಟ್ಟಾರೆ 79 ಪ್ರಕರಣಗಳು ಪತ್ತೆಯಾಗಿವೆ. ಈ ವರೆಗೆ 12,000 ಸ್ಯಾಂಪಲ್ ಗಳನ್ನು ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಮಹಾರಾಷ್ಟ್ರದಿಂದ ಬಂದಿರುವ ಜನರಲ್ಲಿ ಸೋಂಕು ಕಂಡು ಬರುತ್ತಿದ್ದು, ಹಬ್ಬದ ದಿನಗಳಲ್ಲಿ ಈ ಸೋಂಕು ಹರಡದಂತೆ ಜಿಲ್ಲೆಯ ಜನರು ಜಾಗೃತೆ ವಹಿಸಬೇಕು. ಸಮುದಾಯದ ಜನರು ಸ್ವಂತ ನಿಯಂತ್ರಣಕ್ಕೆ ಮುಂದಾಗಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಪಾಕಾಡಿಕೊಂಡು ರಸ್ತೆಗಳಲ್ಲಿ ಸಂಚರಿಸಬೇಕು. ಒಬ್ಬರಿಂದ ಇನ್ನೊಬ್ಬರಿಗೆ ಕೊರೊನಾ ಹರಡದಂತೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
ಈ ಕುರಿತು ಸಂಸದ ಭಗವಂತ ಖೂಬಾ ಪ್ರತಿಕ್ರಿಯೆ ನೀಡಿದ್ದು, ಲಾಕ್ ಡೌನ್-4ರಲ್ಲಿ ಸಡಿಲಿಕೆ ನೀಡಿದ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಹೆಚ್ಚಳಕೆ ಕಾರಣವಾಗಿದೆ. ಹೊರ ರಾಜ್ಯದಿಂದ ಬಂದವರಲ್ಲಿ ಸೋಂಕು ಕಂಡು ಬರುತ್ತಿದ್ದು, ಈ ಬಾರಿ ರಂಜಾನ್ ಹಬ್ಬವನ್ನು ಎಲ್ಲರೂ ಮನೆಯಲ್ಲಿಯೇ ನಮಾಜ್ ಮಾಡಿ ಕುಟುಂಬಸ್ಥರೊಂದಿಗೆ ಹಬ್ಬ ಆಚರಣೆ ಮಾಡಬೇಕು.. ಕೊರೊನಾ ಹಾವಳಿಗೆ ಯಾರೊಬ್ಬರು ಸಿಲುಕದಂತೆ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Date:24-05-2020
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















