Home ಸುದ್ದಿಗಳು ರಾಜ್ಯ ಸುದ್ದಿ ಬೀದರ ಜಿಲ್ಲೆಯಾದ್ಯಂತ ಮಾ.31ರ ವರೆಗೆ ಕಲಂ 144 ಜಾರಿ.

ಬೀದರ ಜಿಲ್ಲೆಯಾದ್ಯಂತ ಮಾ.31ರ ವರೆಗೆ ಕಲಂ 144 ಜಾರಿ.

ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ- ವಿದೇಶದಿಂದ ಬಂದರವು ಮಾಹಿತಿ ನೀಡಿ

ಬೀದರ: ಕೊರೊನಾ ವೈರಸ್  ಹರಡದಂತೆ ಮುಂಜಾಗೃತ ಕ್ರಮವಾಗಿ ಬೀದರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಡಾ| ಎಚ್.ಆರ್ ಮಹಾದೇವ ನಿಷೇಧಾಜ್ಷೆ ಜಾರೊಗೋಳಿಸಿ ಆದೇಶ ಹೊರಡಿಸಿದ್ದಾರೆ.

ಸಧ್ಯ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣ ಖಚಿತವಾಗಿಲ್ಲ, ನೆರೆ ಜಿಲ್ಲೆ ಕಲಬುರಗಿಯಲ್ಲಿ ಪ್ರಕಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಬೀದರ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಜಿಲ್ಲಾಧಿಕಾರಿಗಳು ಮುಂಜಾಗೃತ ಕ್ರಮವಾಗಿ ಕಲಂ 144 ಜಾರಿ ಮಾಡಿದ್ದಾರೆ. ಜಿಲ್ಲೆಯ ಜನರ ರೋಗ್ಯ ಹೀತದೃಷ್ಟಿಯಿಂದ  ಕ್ರಮಕ್ಕೆ ಮುಂದಾಗಿದ್ದಾರೆ.

ಆದೇಶದ ವಿವರ: ವಿದೇಶದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು ರೋಗ ಲಕ್ಷಣ ಇಲ್ಲದಿದ್ದರೂ ಸಹ ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿ ಇರಬೇಕು. ಆದೇಶದ ಅವಧಿಯಲ್ಲಿ ಊದಕ್ಕಿಂತ ಹೆಚ್ಚಿನ ಜನ ಗುಂಪು ಸೇರುವುದು. ಸಂಚರಿಸುವುದು ಸಂಪೂರ್ಣ ನಿಷೇಧಿಸಲಾಗಿದೆ. ಬೀದರ ಜಿಲ್ಲೆಯಾದ್ಯಂತ ಚಿತ್ರ ಮಂದಿರಗಳು, ಉದ್ಯಾನವನಗಳನ್ನು, ನಾಟಕ ಪ್ರದರ್ಶನ ಹಾಗೂ ಸರಕಾರಿ ಸಮಾರಂಭಗಳಲ್ಲಿ ಜನ ದಟ್ಟಣೆ ಸೇರುವಂತಹ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿನ ಎಲ್ಲಾ ಜಾತ್ರೆ, ಸಂತೆಗಳನ್ನು ಮಾರ್ಚ 31ರ ವರಗೆ ನಿಷೇಧಿಸಲಾಗಿದೆ. ಮದುವೆ, ನಿಶ್ಛಿತಾರ್ಥ ಆತ್ಯದಿ ಅಗತ್ಯ ಕ್ರಮ ವಹಿಸಿ ತಮ್ಮ ಕುಟುಂಬದ ಸದಸ್ಯರ ಮಧ್ಯೆ ನಡೆಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಬಂದ್ ಮಾಡಿ: ಜಿಲ್ಲೆಯಲ್ಲಿನ ಎಲ್ಲಾ ಹೇರ್ ಕಟಿಂಗ್ ಸಲೂನ್ ಮತ್ತು ಪಾರ್ಲರ್ ಅಂಗಡಿಗಳನ್ನು ಮಾ.31ರ ವರೆಗೆ ಮುಚ್ಚಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಸುಳ್ಳು ಮಾಹಿತಿ ಕ್ರಮ: ಕೊರೊನಾ ವೈರಸ್ ಬಗ್ಗೆ ಸುಳ್ಳು ಪ್ರಚಾರವನ್ನು ವಾಟ್ಸ್ಪ್ ಫೇಸ್ ಬುಕ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದರೆ ಅಂತಹ ವ್ಯಕ್ತಿಗಳ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ. ಈಗಾಲೇ ಜಿಲ್ಲಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಿದ್ದಾರೆ.

 

Date: 18-03-2020  Time: 5:25PM

Check Also

ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ

*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…