ಬೀದರ: ಫೆ.7ರಿಂದ ವಿಮಾನ ಹಾರಾಟ ಶುರು.
ಬೀದರ: ಫೆ.7ರಂದು ಬೀದರದಿಂದ ನಾಗರಿಕ ವಿಮಾನಯಾನ ಸೇವೆಯನ್ನು ಟರ್ಬೋ ಮೇಘಾ ಏರ್‌ಲೈನ್‌ರವರಿಂದ ಬೀದರಿನಿಂದ ಬೆಂಗಳೂರಿನವರೆಗೆ ಆರಂಭವಾಗಲ್ಲಿದೆ ಎಂದು
ಬೀದರ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಕುರಿತಂತೆ ಜ.30ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ಸರ್ಕಾರ ಮತ್ತು ಜಿಎಂಆರ್-ಹೈದ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಜಿಎಚ್‌ಐಎಎಲ್) ಇವರೊಂದಿಗೆ ಒಡಂಬಡಿಕೆಗೆ ಸಹಿ ಮಾಡಿ, ದಾಖಲೆಗಳನ್ನು ಹಸ್ತಾಂತರಿಸಲಾಯಿತು.
ಕರ್ನಾಟಕ ಸರ್ಕಾರದ ಪರವಾಗಿ ಜಿಲ್ಲಾಧಿಕಾರಿಗಳಾದ ಡಾ| ಹೆಚ್.ಆರ್.ಮಹಾದೇವ್ ಹಾಗೂ ಜಿಎಂಆರ್- ಹೈದ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಜಿಹೆಚ್‌ಐಎಎಲ್) ಪರವಾಗಿ ರಾಜೇಶ್ ಅರೋರಾ ಅವರು ಒಡಂಬಡಿಕೆಗೆ ಸಹಿ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಲೋಕಸಭೆ ಸದಸ್ಯ ಭಗವಂತ ಖೂಬಾ, ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಕಪಿಲ್ ಮೋಹನ್, ಟ್ರೂಜೆಟ್ ಸಿಇಓ ಮೂರ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗ್ಯಾನೇಂದ್ರಕುಮಾರ ಗಂಗವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ ಸರ್ಕಾರವು ಬೀದರ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಆಡಳಿತಾತ್ಮಕ ಅನುಮೋದನೆ ನೀಡಿರುತ್ತದೆ. ಬೀದರ ರಕ್ಷಣಾ ವಿಮಾನ ನಿಲ್ದಾಣವು (ಉಡಾನ್-1) ಯೋಜನೆಯಡಿ ಆರ್.ಸಿ.ಎಸ್ ವಿಮಾನ ನಿಲ್ದಾಣ ಎಂದು ಆಯ್ಕೆಯಾಗಿರುತ್ತದೆ. ಬೀದರ ವಿಮಾನ ನಿಲ್ದಾಣ ಕಾರ್ಯಾಚರಣೆಯು ಜಿಹೆಚ್‌ಐಎಎಲ್ ಮುಖಾಂತರ ನಿರ್ವಹಿಸಲು ಫೆ.7ರಂದು ಪ್ರಾರಂಭಿಸಲಾಗುವುದು. ನಾಗರಿಕ ವಿಮಾನಯಾನ ಸೇವೆಯನ್ನು ಟರ್ಬೋ ಮೇಘಾ ಏರ್‌ಲೈನ್‌ರವರಿಂದ ಬೀದರಿನಿಂದ ಬೆಂಗಳೂರಿನವರೆಗೆ ಒದಗಿಸಲಾಗುವುದು. ಬೀದರ ವಿಮಾನ ನಿಲ್ದಾಣ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಜಿಹೆಚ್‌ಐಎಎಲ್ ಮುಖಾಂತರ ನಿರ್ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಅನುಮೋದಿಸಿದ್ದು, ಇದರ ಒಪ್ಪಂದ ಮಾಡಿಕೊಳ್ಳಲಾಯಿತು.
ಬೀದರ ವಿಮಾನ ನಿಲ್ದಾಣದ ಸಿವಿಲ್ ಅಭಿವೃದ್ಧಿ ಕಾಮಗಾರಿಗಳನ್ನು ಕೆಎಸ್‌ಐಐಡಿಸಿ ಅವರ ತಾಂತ್ರಿಕ ಮಾರ್ಗದರ್ಶನದಲ್ಲಿ 12.28 ಕೋಟಿ ರೂ.ಗಳ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಬೀದರ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾಮಗಾರಿಯು ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ. ಈ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸದ್ಯ 4.02 ಎಕರೆ ಜಮೀನನ್ನು 3.39 ಕೋಟಿ ವೆಚ್ಚದಲ್ಲಿ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದ್ದು, ಭವಿಷ್ಯದಲ್ಲಿ ಅವಶ್ಯಕವಿರುವ ಜಮೀನನ್ನು ಸಹ ಸೇರಿಸಿ ಒಟ್ಟಾರೆ 13 ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುವುದು. ಈ ಕಾರ್ಯಾಚರಣೆಯಿಂದ ಬೆಂಗಳೂರು ಹಾಗೂ ದೇಶದ ಇತರೆ ಭಾಗಗಳಿಗೆ ವಿಮಾನಯಾನ ಸಂಪರ್ಕವನ್ನು ಕಲ್ಪಿಸಲು ಸಾಧ್ಯವಾಗಲಿದೆ ಹಾಗೂ ಕಲ್ಯಾಣ ಕರ್ನಾಟಕ ಭಾಗದ ವಿಶೇಷವಾಗಿ ಬೀದರ ಸಮಗ್ರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
Date: 30-01-2020 Time:5:30PM
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…
















