ಬೀದರ ಮತ್ತೆರಡು ಪ್ರಕರಣ ಪತ್ತೆ.

ಬೀದರ: ಜಿಲ್ಲೆಯಲ್ಲಿ ಮತ್ತೆ ಎರಡು ಕೋವಿಡ್-19 ಪ್ರಕರಣಗಳು ದೃಢವಾಗಿದ್ದು, ಬೀದರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಈ ಕುರಿತು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿಕೆ ನೀಡಿದ್ದು, ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರಿಗೆ ಸೋಂಕು ಪತ್ತೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಜಮಾತ್ ಗೆ ಹೊಗಿ ಬಂದ ವ್ಯಕ್ತಿಯ ಸಂಬಂಧಿಕರು ಎಂದು ತಿಳಿಸಿದ್ದಾರೆ. ಅಲ್ಲದೆ, ದೆಹಲಿಗೆ ಹೋಗಿ ಬಂದವರು ನೇರವಾಗಿ ಆಸ್ಪತ್ರೆಗೆ ಭೇಟಿನೀಡಿ ಚಿಕಿತ್ಸೆ ಪಡೆಯಬೇಕು. ಸೋಂಕಿತರ ಪತ್ತೆಗೆ ಸಮುದಾಯದ ಜನರು ಸಹಕರಿಸಬೇಕು ಎಂದು ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ. 16 ವರ್ಷ ಹಾಗೂ 35 ವರ್ಷದ ಮಹಿಳೆಗೆ ಪಾಸಿಟಿವ್ ಪತ್ತೆಯಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
Date: 13-04-2020 Time:1:00PM
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















